/newsfirstlive-kannada/media/post_attachments/wp-content/uploads/2024/11/ZAMEER-1-1.jpg)
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಬಹುತೇಕ ಖಚಿತವಾಗುತ್ತಿದೆ. ಆ ಮೂಲಕ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲನ್ನ ಕಂಡಂತಾಗಲಿದೆ.
ರಾಜ್ಯದಲ್ಲಿ ನಡೆದ ಮೂರು ವಿಧಾನಸಭೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ಲಕ್ಷಣ ಕಾಣ್ತಿದೆ. ಈ ಹಿನ್ನೆಲೆಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿಕೆ ಸುರೇಶ್.. ರಾಜ್ಯದ ಮೂರು ಕ್ಷೇತ್ರಗಳಲ್ಲಿ ವಿರೋಧ ಪಕ್ಷಕ್ಕೆ ಉತ್ತರ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ಗೂ ಜನ ಉತ್ತರ ಕೊಟ್ಟಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ ಪುತ್ರ ಇಬ್ಬರಿಗೂ ಉತ್ತರ ಕೊಟ್ಟಿದ್ದಾರೆ. ಅವರ ನಿಲುವು, ಬದ್ಧತೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸಂಡೂರಿನಲ್ಲಿ ಕಾಂಗ್ರೆಸ್ಗೆ ಗೆಲುವು ಖಚಿತ.. ಸೋಲು ಒಪ್ಪಿಕೊಂಡ ಬಿಜೆಪಿ ಅಭ್ಯರ್ಥಿ
ರಾಜ್ಯದ ಅಭಿವೃದ್ಧಿಗೆ ಜನ ಮನ್ನಣೆ ಕೊಟ್ಟಿದ್ದಾರೆ. ಮಾಜಿ ಪ್ರಧಾನಿ, ಮಾಜಿ ಸಿಎಂ ಎಲ್ಲರೂ ಸರ್ಕಾರದ ವಿರುದ್ಧ ಆರೋಪ ಮಾಡಿಕೊಂಡು ಬಂದರು. ಇದೀಗ ಜನರ ಅಭಿಪ್ರಾಯ ತಿಳಿಸಿದ್ದಾರೆ. ಈಗಲಾದ್ರೂ ನಮ್ಮ ಪಕ್ಷದ ಮೇಲೆ, ಸಿಎಂ ಮೇಲೆ ಆರೋಪ ಮಾಡೋದು ಬಿಟ್ಟು ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಚುನಾವಣೆ ಫಲಿತಾಂಶಕ್ಕೂ ಮುನ್ನ ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ಗೆ ಹಿನ್ನಡೆ ಆಗಲಿದೆ ಎಂದು ಹೇಳಲಾಗಿತ್ತು. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆ ಸುರೇಶ್.. ಜಮೀರ್ ಅವರು ಮೊದಲ ಬಾರಿಗೆ ಹೇಳಿಕೆ ನೀಡಿದ್ದಲ್ಲ. ಅವರು ಅದನ್ನ ಮೊದಲೇ ಹೇಳಬೇಕಿತ್ತು. ಕ್ಷೇತ್ರದ ಹಳ್ಳಿಯಲ್ಲಿ ಜಮೀರ್ ಹೇಳಿಕೆ ಚರ್ಚೆ ಆಗಿಲ್ಲ. ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿತ್ತು ಎಂದ ಡಿಕೆ ಸುರೇಶ್ ಹೇಳಿದ್ದಾರೆ.
ಇದನ್ನೂ ಓದಿ:ಚನ್ನಪಟ್ಟಣದಲ್ಲಿ ಮೈತ್ರಿ ಲೆಕ್ಕಾಚಾರ ಉಲ್ಟಾ; ನಿಖಿಲ್ಗೆ ಭಾರೀ ಹಿನ್ನಡೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ