ಬೆಂಗಳೂರಿನ ಪಿಜಿಯಲ್ಲಿದ್ದ ನಂದಿನಿ ದಾರುಣ ಅಂತ್ಯ.. ಆಗಿದ್ದೇನು?

author-image
Veena Gangani
Updated On
ಬೆಂಗಳೂರಿನ ಪಿಜಿಯಲ್ಲಿದ್ದ ನಂದಿನಿ ದಾರುಣ ಅಂತ್ಯ.. ಆಗಿದ್ದೇನು?
Advertisment
  • ಫಾರ್ಚೂನರ್ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದಿದ್ದ ಅಪಘಾತ
  • ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ
  • ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೃತ ನಂದಿನಿ

ಬೆಂಗಳೂರು: ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಮೃತಪಟ್ಟಿರೋ ಘಟನೆ ಬಾಗಲೂರು ರಸ್ತೆಯ ಕೆಐಎಡಿಬಿ ಜಂಕ್ಷನ್​ನಲ್ಲಿ ನಡೆದಿದೆ. ನಂದಿನಿ (24) ಮೃತ ಯುವತಿ.

ಇದನ್ನೂ ಓದಿ:ಪತಿ ಜತೆ ನಟಿ ವೈಷ್ಣವಿ ಗೌಡ ಫುಲ್​ ಮಸ್ತಿ.. ಹೋಗಿದ್ದು ಎಲ್ಲಿಗೆ ಗೊತ್ತಾ..? PHOTOS

ಮೃತ ನಂದಿನಿ ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ನೆಲಮಂಗಲದ ಹುಸ್ಕೂರು ಗ್ರಾಮದ ಯುವತಿ ನಗರದ ಬಾಗಲೂರಿನಲ್ಲಿ ವಾಸವಿದ್ದಳು. ನಿನ್ನೆ ಸಂಜೆ ಕೆಲಸ ಮುಗಿಸಿ ಪಿಜಿಗೆ ಹಿಂದಿರುಗುವಾಗ ಫಾರ್ಚೂನರ್ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದೆ.

publive-image

ಅಪಘಾತದ ರಭಸಕ್ಕೆ ನಂದಿನಿ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟು ಬಿದ್ದಿದೆ. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಯುವತಿ ಉಸಿರು ನಿಲ್ಲಿಸಿದ್ದಾಳೆ. ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment