10ನೇ ತರಗತಿ ವಿದ್ಯಾರ್ಥಿಯನ್ನು ಪ್ರೀತಿಸಿ, ಲೈಂಗಿಕ ಸಂಪರ್ಕ ಆರೋಪ
ಪ್ರೀತಿಯ ಬಲೆಗೆ ಬೀಳಿಸಿ ಮತಾಂತರಕ್ಕೆ ಒತ್ತಾಯಿಸಿದ ಶಾಲೆಯ ಶಿಕ್ಷಕಿ?
ಪೋಕ್ಸೋ ಕಾಯ್ದೆ, ಮತಾಂತರ ನಿಷೇಧ ಕಾನೂನಿನ ಅನ್ವಯ ತನಿಖೆ
ಕಾನ್ಪುರ: ಶಿಕ್ಷಕಿಯೊಬ್ಬರು 10ನೇ ತರಗತಿ ವಿದ್ಯಾರ್ಥಿಯನ್ನು ಪ್ರೀತಿಸಿ, ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಿರೋ ಕಾನ್ಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಕಳೆದ ಅಕ್ಟೋಬರ್ 17ರಂದೇ ಕಾನ್ಪುರ ಖಾಸಗಿ ಶಾಲೆಯ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಅಪ್ರಾಪ್ತ ಬಾಲಕನ ತಂದೆ ತನ್ನ ಮಗನನ್ನು ಶಾಲೆಯ ಶಿಕ್ಷಕಿ ಪ್ರೀತಿಯ ಬಲೆಗೆ ಬೀಳಿಸಿ ಮತಾಂತರಕ್ಕೆ ಮುಂದಾಗಿದ್ದರು ಎಂದು ದೂರಿದ್ದರು. ಈ ಬಗ್ಗೆ ಗೊತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರು ಸುಮ್ಮನಿರುವಂತೆ ಹೇಳಿದ್ದರು ಎಂದಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಕೇಸ್ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ.
10ನೇ ತರಗತಿ ವಿದ್ಯಾರ್ಥಿಗೆ ಪ್ರೀತಿ, ಪ್ರೇಮದ ಪಾಠ ಮಾಡಿದ್ದ ಶಿಕ್ಷಕಿ ಲೈಂಗಿಕ ಸಂಪರ್ಕ ಹೊಂದಿದ್ದರು. ಇದಾದ ಬಳಿಕ ಮತಾಂತರ ಆಗಲು ಒತ್ತಾಯ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಮುಖವಾಗಿ ವಿದ್ಯಾರ್ಥಿಯನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಎಫ್‌ಐಆರ್ ದಾಖಲಿಸಿರುವ ಪೊಲೀಸರು ಪೋಕ್ಸೋ ಕಾಯ್ದೆ ಮತ್ತು ಮತಾಂತರ ನಿಷೇಧ ಕಾನೂನಿನ ಅನ್ವಯ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ