ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐವರು ಸಾವು
ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು ಕಲುಷಿತ ನೀರು ಕೇಸ್
ಉಸ್ತುವಾರಿ ಸಚಿವ ಡಿ.ಸುಧಾಕರ್ ಅನುದಾನ ಮಂಜೂರು ಬಗ್ಗೆ ಮಾಹಿತಿ
ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ಸಂಭವಿಸಿದ ದುರಂತ ಹಿನ್ನೆಲೆ, ಇಲ್ಲಿನ ಸಮಸ್ಯೆ ನಿರ್ವಹಣೆ ಜೊತೆೆ, ಮೂಲ ಸೌಕರ್ಯಗಳಿಗಾಗಿ ಸರ್ಕಾರ 4 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ.
ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾಹಿತಿ ನೀಡಿದ್ದಾರೆ. ಕವಾಡಿಗರ ಹಟ್ಟಿಯಲ್ಲಿ ಇತ್ತೀಚೆಗೆ ಕಲುಷಿತ ನೀರಿನಿಂದ ಸಂಭವಿಸಿದ ಅಹಿತಕರ ಘಟನೆ ಸಂಬಂಧ, ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಹಾಗೂ ಮೂಲ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕ ಅಭಿವೃದ್ಧಿಗೆ ಸರಕಾರ ಮುಂದಾಗಿದೆ. ಇಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿರೋದ್ರಿಂದ, ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರು ಮಾಡಲು ಸಹ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಅನುದಾನ ಮಂಜೂರು ಮಾಡಿದ್ದೇವೆ. ಸ್ವಚ್ಛತಾ ಕಾರ್ಯಕ್ರದಮ ಜೊತೆಗೆ ವಿವಿಧ ಮೂಲ ಸೌಕರ್ಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮವನ್ನು ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇನ್ನು ಕಲುಷಿತ ನೀರಿಗೆ ಒಟ್ಟು ಐದು ಮಂದಿ ಸಾವನ್ನಪ್ಪಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ