newsfirstkannada.com

ಬೆಳ್ಳಂಬೆಳಗ್ಗೆ ಕಾರು-ಟ್ರಕ್ ಮಧ್ಯೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

Share :

Published April 13, 2024 at 8:32am

  ಇಬ್ಬರು ಪುರುಷರು, ಓರ್ವ ಬಾಲಕ ಸೇರಿ ನಾಲ್ವರು ಸಾವು

  ಅಪಘಾತದ ಹೊಡೆತಕ್ಕೆ ಕಾರು ನುಜ್ಜುಗುಜ್ಜಾಗಿದೆ

  ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

ವಿಜಯಪುರ: ಕಾರು ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.

ಕೆಎ-28 D 1021 ನಂಬರ್ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ವಿಜಯಪುರ ಮೂಲದ್ದು ಎಂದು ತಿಳಿದುಬಂದಿದೆ. ಮೃತರಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್; ಈ ವಿಚಾರದಲ್ಲಿ ಆರ್​ಸಿಬಿಗೆ ಭಾರೀ ಮುಜುಗರ..!

ಕಾರು ವಿಜಯಪುರದಿಂದ ಜಮಖಂಡಿಗೆ ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಟ್ರಕ್ ಬರುತ್ತಿತ್ತು. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಳ್ಳಂಬೆಳಗ್ಗೆ ಕಾರು-ಟ್ರಕ್ ಮಧ್ಯೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/04/VIJ-ACCIDENT.jpg

Load More