2ನೇ ಟೆಸ್ಟ್​​ ಪಂದ್ಯಕ್ಕೆ ಬಲಿಷ್ಠ ಟೀಮ್​ ಇಂಡಿಯಾ; ನಾಲ್ವರು ಆರ್​​​ಸಿಬಿ ಪ್ಲೇಯರ್ಸ್​ಗೆ ಬಂಪರ್​​!

author-image
Ganesh Nachikethu
Updated On
ಭಾರತ ಟೆಸ್ಟ್​ ತಂಡಕ್ಕೆ ಸ್ಫೋಟಕ ಬ್ಯಾಟರ್​ ಎಂಟ್ರಿ; ಟೀಮ್​ ಇಂಡಿಯಾಗೆ ಬಂತು ಹಾರ್ಸ್​ ಪವರ್​
Advertisment
  • ಟೀಮ್​ ಇಂಡಿಯಾ, ಬಾಂಗ್ಲಾದೇಶದ ನಡುವೆ 2ನೇ ಟೆಸ್ಟ್​​ ಮ್ಯಾಚ್​​!
  • ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರೋ ಟೆಸ್ಟ್​​
  • 2ನೇ ಟೆಸ್ಟ್​ ಪಂದ್ಯದಲ್ಲೂ 4 ಮಂದಿ ಆರ್​​ಸಿಬಿ ಪ್ಲೇಯರ್ಸ್​ಗೆ ಚಾನ್ಸ್​​​

ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್​​ ನ್ಯಾಷನಲ್​​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆದ ಮೊದಲ ಟೆಸ್ಟ್​​​ ಪಂದ್ಯದಲ್ಲಿ ಟೀಮ್​​​ ಇಂಡಿಯಾ ಬರೋಬ್ಬರಿ 280 ರನ್​ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಯೆಸ್​​​, ಟೀಮ್​ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್​ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯ ಸೆಪ್ಟೆಂಬರ್ 27ನೇ ತಾರೀಕಿನಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಹೇಗಾದ್ರೂ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಪ್ಲಾನ್​ ಮಾಡಿಕೊಂಡಿದೆ. ಅದರಲ್ಲೂ ಟೀಮ್​ ಇಂಡಿಯಾ 2ನೇ ಪಂದ್ಯ ಕೂಡ ಗೆದ್ದು ಸರಣಿ ಕ್ಲೀನ್​ ಸ್ವೀಪ್​​ ಮಾಡುವ ನಿರೀಕ್ಷೆಯಲ್ಲಿದೆ.

ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ

ಬಾಂಗ್ಲಾ ಎದುರಿನ 2ನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದ್ರೆ, ಕೆಲ ಆಟಗಾರರಿಗೆ ಜಾಕ್​ಪಾಟ್​ ಹೊಡೆದಿದೆ. ಅಷ್ಟೇ ಅಲ್ಲ, ಕೆಲವು ಆಟಗಾರರಿಗೆ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ.

ನಾಲ್ವರು ಆರ್​​​ಸಿಬಿ ಪ್ಲೇಯರ್ಸ್​ಗೆ ಸ್ಥಾನ!

16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್​ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್​ ದಯಾಳ್ ಕಾಣಿಸಿಕೊಂಡಿದ್ದಾರೆ. ವಿಶೇಷ ಅಂದರೆ ಆರ್​ಸಿಬಿ ತಂಡದ ಭಾಗವಾಗಿರುವ ನಾಲ್ಕು ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್​ಗೆ ಅವಕಾಶ ನೀಡಲಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment