ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವೆ 2ನೇ ಟೆಸ್ಟ್ ಮ್ಯಾಚ್!
ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರೋ ಟೆಸ್ಟ್
2ನೇ ಟೆಸ್ಟ್ ಪಂದ್ಯದಲ್ಲೂ 4 ಮಂದಿ ಆರ್ಸಿಬಿ ಪ್ಲೇಯರ್ಸ್ಗೆ ಚಾನ್ಸ್
ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತೀಚೆಗೆ ಚೆನ್ನೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 280 ರನ್ಗಳಿಂದ ಗೆದ್ದು ಬೀಗಿದೆ. ಇದರ ಮಧ್ಯೆ 2ನೇ ಟೆಸ್ಟ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಯೆಸ್, ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯ ಸೆಪ್ಟೆಂಬರ್ 27ನೇ ತಾರೀಕಿನಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಹೇಗಾದ್ರೂ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಪ್ಲಾನ್ ಮಾಡಿಕೊಂಡಿದೆ. ಅದರಲ್ಲೂ ಟೀಮ್ ಇಂಡಿಯಾ 2ನೇ ಪಂದ್ಯ ಕೂಡ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ.
ಬಲಿಷ್ಠ ಟೀಮ್ ಇಂಡಿಯಾ ಪ್ರಕಟ
ಬಾಂಗ್ಲಾ ಎದುರಿನ 2ನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದ್ರೆ, ಕೆಲ ಆಟಗಾರರಿಗೆ ಜಾಕ್ಪಾಟ್ ಹೊಡೆದಿದೆ. ಅಷ್ಟೇ ಅಲ್ಲ, ಕೆಲವು ಆಟಗಾರರಿಗೆ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ.
ನಾಲ್ವರು ಆರ್ಸಿಬಿ ಪ್ಲೇಯರ್ಸ್ಗೆ ಸ್ಥಾನ!
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಕೋಟಾದದಲ್ಲಿ ಆರ್.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ವಿಶೇಷ ಅಂದರೆ ಆರ್ಸಿಬಿ ತಂಡದ ಭಾಗವಾಗಿರುವ ನಾಲ್ಕು ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್ಗೆ ಅವಕಾಶ ನೀಡಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್