ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಅನಾಹುತ
ಓರ್ವ ಪೊಲೀಸ್ ಅಧಿಕಾರಿ ಸೇರಿ ನಾಲ್ವರಿಗೆ ಗಂಭೀರ ಗಾಯ
ಉಗ್ರರ ದಾಳಿ ಬಗ್ಗೆ ಭಾರತೀಯ ಸೇನೆ ಹೇಳಿದ್ದೇನು..?
ಜಮ್ಮು ಮತ್ತು ಕಾಶ್ಮೀರದ ದೋಡಾ (Doda) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೈನಿಕರ ನಡುವೆ ಗುಂಡಿನ ಕಾಳಗ ನಡೆದಿದೆ. ಸೇನೆ ನಡೆಸಿದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿತ್ತು. ದೇಸಾ ಅರಣ್ಯ ಪ್ರದೇಶದ ಧರಿ ಗೋಟೆಯಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿ ನಡೆದಿದೆ. ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಸೇನೆ ಹೇಳಿದ್ದೇನು?
ಕಾರ್ಯಾಚರಣೆ ನಡೆದ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ. ಕೊನೆಯ ಮಾಹಿತಿ ಸಿಗುವವರೆಗೂ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದೇ ಕಾರ್ಯಾಚರಣೆ ಶುರುಮಾಡಲಾಗಿದೆ. ಭಯೋತ್ಪಾದಕ ಸಂಘಟನೆ ಕಾಶ್ಮೀರ ಟೈಗರ್ಸ್ ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಸೇನೆ ತಿಳಿಸಿದೆ.
ಇದನ್ನೂ ಓದಿ:ದೇಗುಲದ ದ್ವಾರ ಬಾಗಿಲಲ್ಲೇ ಪ್ರಾಣಬಿಟ್ಟ ಮಹಿಳೆ; ಸಾವಿಗೆ ಕಾರಣ ಒಂದು ಮಂಗ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ