ಕಾಮಿಡಿ ನಟ ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದ ಸ್ನೇಹಿತರು.. ಮುಗಿಲು ಮುಟ್ಟಿದ ಆಕ್ರಂದನ!

author-image
Veena Gangani
Updated On
ಅಕ್ಕ, ಅಕ್ಕ ಎಂದು ಬಾಯಿ ತುಂಬಾ ಕರೆಯುತ್ತಿದ್ದ; ರಾಕೇಶ್ ಪೂಜಾರಿ ನೆನೆದು ಭಾವುಕರಾದ ರಕ್ಷಿತಾ, ಅನುಶ್ರೀ
Advertisment
  • ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ
  • ಮೆಹಂದಿ ಕಾರ್ಯಕ್ರಮದಲ್ಲಿ ದಿಢೀರ್ ಕುಸಿದು ಬಿದ್ದ ನಟ ರಾಕೇಶ್​
  • ನಟ ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದ ಗೆಳೆಯರು

ಕಾಮಿಡಿ ಕಿಲಾಡಿಗಳು ಸೀಸನ್ -3ರ ವಿನ್ನರ್​ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಸ್ನೇಹಿತನ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ದಿಢೀರ್ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾರೆ.

publive-image

ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ರಾಕೇಶ್ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಗೆ ಆಧಾರವಾಗಿದ್ದ ಮಗ ರಾಕೇಶ್​ನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಕನ್ನಡ ಕಿರುತೆರೆಯ ಖ್ಯಾತ ಕಲಾವಿದ ರಾಕೇಶ್ ಪೂಜಾರಿ ದುರಂತ ಅಂತ್ಯ; ಕಾರಣವೇನು?

publive-image

ನಟ ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್, ಪ್ರವೀಣ್, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟರ್ ವಿಜಯ್ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವರು ಗೆಳೆಯನ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸದ್ಯ ವಿಧಿ ವಿಧಾನದಂತೆ ರಾಕೇಶ್ ಪೂಜಾರಿ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

publive-image

ರಾಕೇಶ್ ಪೂಜಾರಿ ಅವರ ಹುಟ್ಟೂರು ಉಡುಪಿ. ಇವರ ತಂದೆ ದಿನಕರ್ ಪೂಜಾರಿ ಹಾಗೂ ತಾಯಿ ಶಾಂಭವಿ. ರಾಕೇಶ್​ ಪೂಜಾರಿ ಅವರಿಗೆ ಒಬ್ಬ ತಂಗಿ ಕೂಡ ಇದ್ದಾರೆ. ಜೀವನದಲ್ಲಿ ಸಾಕಷ್ಟು ಹಿನ್ನಡೆ ಅನಿಭವಿಸಿದ್ದ ರಾಕೇಶ್ ಪೂಜಾರಿಯವರಿಗೆ ಮೊದಲ ಯಶಸ್ಸು ಸಿಕ್ಕಿದ್ದು ಕಾಮಿಡಿ ಕಿಲಾಡಿಗಳು ಸೀಸನ್ 3 ವಿನ್ನರ್ ಆಗುವ ಮೂಲಕ.

ಇದನ್ನೂ ಓದಿ:Breaking: ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

publive-image

ಕಾಮಿಡಿ ಕಿಲಾಡಿನಲ್ಲಿ ವಿನ್ನರ್ ಆಗಬೇಕೆಂದು ರಾಕೇಶ್ ಹಗಲಿರುಳು ಎನ್ನದೆ ಶ್ರಮಿಸಿದ್ದರು. ಹಾಗೆಯೇ ತುಳುನಾಡಿನ ಕೊರಗಜ್ಜ ದೈವ ದೇವರಿಗೂ ಹರಕೆಯನ್ನು ಹೇಳಿಕೊಂಡಿದ್ದರು ರಾಕೇಶ್. ಅಂತೆಯೇ ಕೊರಗಜ್ಜ ದೈವದ ಅನುಗ್ರಹದಿಂದ ಗೆಲುವು ಸಾಧಿಸಿದರು. ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ನಾಯಕ ಏಜೆಯ ಪಿಎ ವಿರೂಪಾಕ್ಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಾಕೇಶ್ ಅನಿರೀಕ್ಷಿತ ಸಾವಿನಿಂದ ಕಿರುತೆರೆ ಇಂಡಸ್ಟ್ರಿ ಆಘಾತಕ್ಕೆ ಒಳಗಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment