ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್​ನ್ಯೂಸ್.. ತಿಳಿದುಕೊಳ್ಳಲೇಬೇಕಾದ ಸ್ಟೋರಿ

author-image
Ganesh
Updated On
ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್​ನ್ಯೂಸ್.. ತಿಳಿದುಕೊಳ್ಳಲೇಬೇಕಾದ ಸ್ಟೋರಿ
Advertisment
  • ನಾಳೆಯಿಂದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಓಪನ್
  • ಬಿಪಿಎಲ್ ಕುಟುಂಬಗಳಿಗೆ ಉಚಿತ ಕಿಮೋಥೆರಪಿ
  • ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು

ಬೆಂಗಳೂರು: ಕರ್ನಾಟಕ ಸರ್ಕಾರ ಕ್ಯಾನ್ಸರ್ ಪೀಡಿತ ರೋಗಿಗಳ ಚಿಕಿತ್ಸೆ ವಿಚಾರದಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ (Chemotherapy) ಓಪನ್ ಆಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಆರೋಗ್ಯ ಸಚಿವರು, ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ.
ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಅಂತಾ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡ್ತಿದ್ದೇವೆ. ರೋಗಿಗಳು ಹೆಚ್ಚಾಗುತ್ತಿದೆ, ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿದೆ. ಶೇಕಡಾ 60ರಷ್ಟು ರೋಗಿಗಳು ಕೀಮೋಗೆ 100 ಕಿಮೀ ಪ್ರಯಾಣ‌ ಮಾಡಬೇಕು. ಸಮಯ ಮತ್ತು ತೊಂದರೆ ಜೊತೆಗೆ ಖರ್ಚು ಹೆಚ್ಚಾಗುತ್ತಿದೆ. ಆದರೆ ಇನ್ಮುಂದೆ ಅಂತಹ ಸಮಸ್ಯೆಗಳು ಕಡಿಮೆ ಆಗಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹುಡುಗರ ಹಾರ್ಟ್​ಗೆ ಸಂಚಕಾರ.. ಯುವಕರೇ ‘ಬ್ರೋಕನ್​ ಹಾರ್ಟ್​​ ಸಿಂಡ್ರೋಮ್’ ಬಗ್ಗೆ ಇರಲಿ ಎಚ್ಚರ..!

publive-image

ಕಳೆದ ಬಜೆಟ್​ನಲ್ಲಿ ಕೀಮೋಥೆರಪಿ ಸ್ಥಾಪನೆ ಮಾಡೋದಾಗಿ ಘೋಷಣೆ ಮಾಡಿದ್ವಿ. ನಾಳೆ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಪ್ರಾರಂಭಿಸುತ್ತಿದ್ದೇವೆ. ನಾಳೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಕ್ಯಾನ್ಸರ್ ಪತ್ತೆಯಾಗಿದೆ ಅನ್ನುವವರು ಕೀಮೋ ಥೆರಪಿ ಪಡೆಯಬಹುದು. ಎಲ್ಲಾ ರೀತಿಯ ಟ್ರೈನಿಂಗ್​ಗಳನ್ನು ಮಾಡಲಾಗಿದೆ. ಮೆಡಿಕಲ್ ಅಂಕಾಲಜಿಸ್ಟ್​ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ನರ್ಸ್​ಗಳಿಗೆ ತರಬೇತಿ ನೀಡುತ್ತಿದ್ದೇವೆ.

ಪ್ರತಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು ಇಡುತ್ತೇವೆ. ಅದಕ್ಕೆ ಇಬ್ಬರು ನರ್ಸ್ ಗಳು ಇರುತ್ತಾರೆ. ಉಚಿತ ಚಿಕಿತ್ಸೆಗೆ ತುಂಬಾ ಅನುಕೂಲ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕಿಮೋಥೆರಪಿ ಸಿಗಲಿದೆ ಅಂತಾ ಮಾಹಿತಿ ನೀಡಿದರು.

ಇದನ್ನೂ ಓದಿ: ಮೈಸೂರು ಸೋಪ್ ರಾಯಭಾರಿಯಾದ ತಮನ್ನಾ.. 2 ವರ್ಷಕ್ಕೆ ಪಡೆಯೋ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment