/newsfirstlive-kannada/media/post_attachments/wp-content/uploads/2024/07/Parameshwa.jpg)
ದಾವಣಗೆರೆ: ಮೊನ್ನೆಯಷ್ಟೇ ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ನೂರಾರು ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ; ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ; ಮುಂದೇನಾಯ್ತು?
ಹಿಂದೂ ಸಂಘಟನೆ ಕಾರ್ಯಕರ್ತರು ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡಿ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್‌ಗಳಿಗೆ ಮಾರುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ನೂರಾರು ಮಾಂಸದ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು ಪರಿಶೀಲನೆ ನಡೆಸಲು ಪಟ್ಟು ಹಿಡಿದಿದ್ದರು. ಇದೀಗ ಬೆಂಗಳೂರು ನಾಯಿ ಮಾಂಸ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಅನವಶ್ಯಕ ದುರುದ್ದೇಶದಿಂದ ದೂರು ದಾಖಲಾಗಿತ್ತು. ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿವಸಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿಯಾಗಿದೆ. ಅದು ನಾಯಿ ಮಾಂಸ ಅಲ್ಲ. ಮೇಕೆ ಮಾಂಸ ಎನ್ನುವುದು ವರದಿಯಲ್ಲಿ ಧೃಡವಾಗಿದೆ. ಇವತ್ತು ವರದಿ ಬಂದಿದೆ. ಅದರಲ್ಲಿ ಅದು ಮೇಕೆ ಮಾಂಸ ಎಂದು ವರದಿ ಆಗಿದೆ ಅಂತ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ