newsfirstkannada.com

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿ ಆದ್ರಾ? ಹಾಸನ ಕೇಸ್‌ಗೆ ಟ್ವಿಸ್ಟ್ ಕೊಟ್ಟ ಗೃಹ ಸಚಿವರು; ಹೇಳಿದ್ದೇನು?

Share :

Published April 28, 2024 at 7:30pm

Update April 28, 2024 at 8:04pm

    ತುಂಬಾ ಗಂಭೀರವಾಗಿ ಈ ಕೇಸ್​​ ತೆಗೆದುಕೊಂಡಿದ್ದೇವೆ- ಸಚಿವ ಜಿ. ಪರಮೇಶ್ವರ್

    ತೀವ್ರ ಸ್ವರೂಪ ಪಡೆದುಕೊಂಡ ಹಾಸನದ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣ

    ವಿದೇಶಕ್ಕೆ ಹೋಗಿದ್ದರೆ SIT ಪೊಲೀಸರು ಅವರನ್ನು ಕರೆದುಕೊಂಡು ಬರ್ತಾರೆ

ಹಾಸನದ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತಂಡ ರಚನೆ ಮಾಡಿದೆ. ತನಿಖೆ ಆರಂಭವಾಗುತ್ತಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತು ಕೇಳಿ ಬಂದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​​; ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ ಎಂದ ಭವ್ಯ ನರಸಿಂಹಮೂರ್ತಿ

ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಸರ್ಕಾರ ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಎಸ್ಐಟಿ ತಂಡ ರಚಿಸಿ ಇಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ SIT ತನಿಖೆ ನಡೆಯಲಿದೆ. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದ್ದಾರೆ ಎಂದು ಹೇಳಿದೆ. SIT ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಯಾವುದೇ ಸರ್ಕಾರದ ಹಸ್ತಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗುತ್ತೆ. ಪ್ರಜ್ವಲ್ ರೇವಣ್ಣಗೆ ನೋಟೀಸ್ ಕೊಡುವ ವಿಚಾರ SIT ಅಧಿಕಾರಿಗಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಶ್ನೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅದು ನನಗೆ ಸಂಬಂಧ ಪಟ್ಟಿಲ್ಲ. ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ವಿದೇಶಕ್ಕೆ ಹೋಗಿದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು. ಅವರು ಕರೆದುಕೊಂಡು ಬರ್ತಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೆಚ್‌.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿ ಆದ್ರಾ? ಹಾಸನ ಕೇಸ್‌ಗೆ ಟ್ವಿಸ್ಟ್ ಕೊಟ್ಟ ಗೃಹ ಸಚಿವರು; ಹೇಳಿದ್ದೇನು?

https://newsfirstlive.com/wp-content/uploads/2024/04/revanna.jpg

Load More