ದೆಹಲಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದ ಜೋ ಬೈಡನ್
5G ಮತ್ತು 6G ತಂತ್ರಜ್ಞಾನಗಳು ಸೇರಿ ಹಲವು ವಿಷಯಗಳು ಚರ್ಚೆ
ವಿಶ್ವದ ಎರಡು ದಿಗ್ಗಜ ರಾಷ್ಟ್ರದ ಮುಖ್ಯಸ್ಥರಿಂದ ಮಹತ್ವದ ಮಾತುಕತೆ
ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ಮೋದಿಯವರು ದೆಹಲಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ G-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ರಾತ್ರಿ 8 ಗಂಟೆ ಸುಮಾರಿಗೆ ಆಗಮಿಸಿದ ಬಳಿಕ ಪ್ರಧಾನಿ ನಿವಾಸಕ್ಕೆ ತೆರಳಿದ್ದರು.
ದೆಹಲಿಯ ಪ್ರಧಾನಿ ನಿವಾಸದಲ್ಲಿ ದ್ವಿಪಕ್ಷೀಯ ಚರ್ಚೆ ನಡೆಸಿದ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ಮೋದಿ ಅವರು, ಜೆಟ್ ಇಂಜಿನ್‌ಗಳ ಒಪ್ಪಂದ, ಡ್ರೋನ್‌ಗಳ ಖರೀದಿ ಮತ್ತು 5G ಮತ್ತು 6G ನೆಟ್‌ವರ್ಕ್‌ಗಳಂತ ತಂತ್ರಜ್ಞಾನಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ಮಾಡಿದರು ಎನ್ನಲಾಗಿದೆ. 2024 ರಲ್ಲಿ ಭಾರತ ಆಯೋಜಿಸಲಿರುವ ಮುಂದಿನ ಕ್ವಾಡ್ ನಾಯಕರ ಶೃಂಗಸಭೆಗೆ ಅಧ್ಯಕ್ಷ ಬೈಡನ್ ಆಗಮಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Watch: PM Modi, US President Biden meet in Delhi pic.twitter.com/N1piHpYiPv
— Sidhant Sibal (@sidhant) September 8, 2023
ಇನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾರತಕ್ಕೆ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಬೈಡನ್ರನ್ನ ನಂಬರ್- 7 ಲೋಕ ಕಲ್ಯಾಣ ಮಾರ್ಗಕ್ಕೆ ಸ್ವಾಗತಿಸಿದ್ದಕ್ಕೆ ಸಂತೋಷವಾಗಿದೆ. ದ್ವಿಪಕ್ಷೀಯ ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಭಾರತ ಮತ್ತು USA ನಡುವಿನ ಆರ್ಥಿಕ ಮತ್ತು ತಂತ್ರಜ್ಞಾನದ ಬಗ್ಗೆ ಮಾತುಕತೆಯಾಗಿವೆ. ವಿಶ್ವದ ಈ ಎರಡು ದಿಗ್ಗಜ ರಾಷ್ಟ್ರಗಳ ನಡುವಿನ ಸ್ನೇಹವು ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ ಎಂದು ಇದೇ ವೇಳೆ ಪ್ರಧಾನಿ ಮೋದಿಯವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ