/newsfirstlive-kannada/media/post_attachments/wp-content/uploads/2025/05/janardhan-reddy4.jpg)
ಬೆಂಗಳೂರು: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.
10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿಗೆ ಅನುಮತಿ ಇಲ್ಲ. ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ. ಸಿಬಿಐನ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಇದನ್ನೂ ಓದಿ: BREAKING: ಗಾಲಿ ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ಏನಿದು ಪ್ರಕರಣ?
ಆಂಧ್ರದಲ್ಲಿ ವೈ.ಎಸ್ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ಆಗಿದೆ ಎಂದು ಆರೋಪಿಸಲಾಗಿತ್ತು.
ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಆಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐನ ವಿಶೇಷ ಕೋರ್ಟ್, ಶ್ರೀನಿವಾಸರೆಡ್ಡಿ, ಜನಾರ್ದನರೆಡ್ಡಿ, ಅಲಿಖಾನ್, ಸಬಿತಾ ಇಂದ್ರಾರೆಡ್ಡಿ, ಕೃಪಾನಂದ ದೋಷಿಗಳು ಎಂದು ಹೇಳಿತ್ತು. ಶಿಕ್ಷೆಯ ಪ್ರಮಾಣವಾಗಿ 5 ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ಪ್ರಕಟ ಮಾಡಿತ್ತು.
ಇದನ್ನೂ ಓದಿ: ತಮಿಳು Sa Re Ga Ma Pa ವೇದಿಕೆ ಮೇಲೆ ಶಿವಾನಿಗೆ ಬಿಗ್ ಸರ್ಪ್ರೈಸ್.. ಏನದು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ