/newsfirstlive-kannada/media/post_attachments/wp-content/uploads/2024/06/Gambhir-Rohit.jpg)
ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಬಲಿಷ್ಠ ಭಾರತ ತಂಡ ಪ್ರಕಟವಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಟೀಮ್ ಇಂಡಿಯಾ ಘೋಷಣೆ ಮಾಡಲಾಗಿದೆ. 12.30ಕ್ಕೆ ಸುದ್ದಿಗೋಷ್ಠಿ ಕರೆದ್ರೂ 3 ಗಂಟೆಗೆ ಟೀಮ್ ಇಂಡಿಯಾ ಘೋಷಣೆ ಆಗಲು ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವಿನ ಭಿನ್ನಾಭಿಪ್ರಾಯ ಅನ್ನೋ ವಿಚಾರ ಬಹಿರಂಗವಾಗಿದೆ.
ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಸೆಲೆಕ್ಷನ್ ಕಮಿಟಿ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಜತೆ ಚರ್ಚಿಸಿ ಒಂದು ಪಟ್ಟಿ ಸಿದ್ಧಪಡಿಸಿತ್ತು. ಮಧ್ಯಾಹ್ನ 12.30ಕ್ಕೆ ಇನ್ನೇನು ತಂಡ ಘೋಷಣೆ ಆಗಬೇಕು ಎನ್ನುವಷ್ಟರಲ್ಲಿ ಗಂಭೀರ್, ರೋಹಿತ್ ಮಧ್ಯೆ ಚರ್ಚೆ ನಡೆದಿದೆ.
ಹಾರ್ದಿಕ್ಗಾಗಿ ಗಂಭೀರ್ ಬ್ಯಾಟಿಂಗ್
ಇನ್ನು, ಗೌತಮ್ ಗಂಭೀರ್ ಹಾರ್ದಿಕ್ ಪಾಂಡ್ಯ ಅವರನ್ನು ವೈಸ್ ಕ್ಯಾಪ್ಟನ್ ಎಂದು ಘೋಷಣೆ ಮಾಡುವಂತೆ ಪಟ್ಟು ಹಿಡಿದಿದ್ದರು. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಮಾಡಿದ್ದಾರೆ ಎಂದು ವರದಿ ಆಗಿದೆ.
ಸಂಜು ಸ್ಯಾಮ್ಸನ್ ಪರ ಗಂಭೀರ್ ಬ್ಯಾಟಿಂಗ್
ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ತಾಕೀತು ಮಾಡಿದ್ದರು. ರೋಹಿತ್ ಶರ್ಮಾ ಪಂತ್ ಪರ ಬ್ಯಾಟ್ ಮಾಡಿದ್ದು, ಗಂಭೀರ್ ಮಾತಿಗೆ ಸೊಪ್ಪು ಹಾಕಲಿಲ್ಲ. ಈ ಮೂಲಕ ಗಂಭೀರ್, ರೋಹಿತ್ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಎದ್ದು ಕಾಣುತ್ತಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಹೀಗಿದೆ!
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.
ಇದನ್ನೂ ಓದಿ:ಮಹಾ ಎಡವಟ್ಟು; ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ