/newsfirstlive-kannada/media/post_attachments/wp-content/uploads/2024/06/Kohli_Rohit_Gambhir.jpg)
ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡಲೇಬೇಕು ಎಂದು ಸೂಚನೆ ನೀಡಿದ್ದಾರೆ ಎಂದರು ವರದಿಯಾಗಿದೆ.
ಇತ್ತೀಚೆಗೆ ಯುಎಸ್ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಪರ ಈ ಮೂವರು ಸ್ಟಾರ್ ಕಾಣಿಸಿಕೊಂಡಿದ್ದರು. ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಕಳೆದ 6 ತಿಂಗಳಿಂದ ಬಿಡುವಿಲ್ಲದೆ ಕ್ರಿಕೆಟ್ ಆಡುತ್ತಿದ್ದು, ಇವರಿಗೆ ಶ್ರೀಲಂಕಾ ವಿರುದ್ಧದ ಸರಣಿಗಾಗಿ ಸಂಭಾವ್ಯ ವಿಶ್ರಾಂತಿ ನೀಡಲಾಗಿತ್ತು. ಆದರೀಗ, ಕೊಹ್ಲಿ, ರೋಹಿತ್, ಬುಮ್ರಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡಲೇಬೇಕು ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆಡಲೇಬೇಕು ಎಂದ ಗಂಭೀರ್
ರಾಷ್ಟ್ರೀಯ ಮಾಧ್ಯಮದಲ್ಲಿ ವರದಿಯಾಗಿರೋ ಪ್ರಕಾರ ಮುಖ್ಯ ಕೋಚ್ ಗಂಭೀರ್ ಕೊಹ್ಲಿ, ರೋಹಿತ್, ಬುಮ್ರಾ ತಮ್ಮ ರಜೆಯನ್ನು ಮುಗಿಸಬೇಕು. ಮುಂಬರುವ ವೈಟ್-ಬಾಲ್ ಸರಣಿಯಲ್ಲಿ ಭಾಗವಹಿಸಬೇಕು ಎಂದು ಕೇಳಿಕೊಂಡಿದ್ದಾರಂತೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಭಾರತದಿಂದ ಹೊರಗಿದ್ದಾರೆ. ಬೂಮ್ರಾ ಈಗಾಗಲೇ ಗಂಭೀರ್ ಮನವಿಗೆ ಪ್ರತಿಕ್ರಿಯೆ ನೀಡಿದ್ದು, ರೋಹಿತ್, ಕೊಹ್ಲಿ ಇನ್ನೂ ರಿಯಾಕ್ಟ್ ಮಾಡಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರೋಹಿತ್ ಮಾತಿಗೆ ಮನ್ನಣೆ ಕೊಟ್ಟ ಬಿಸಿಸಿಐ; ಹಾರ್ದಿಕ್ ಅಲ್ಲ, ಸೂರ್ಯ ಕ್ಯಾಪ್ಟನ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್