newsfirstkannada.com

ಗ್ಯಾಸ್​​ ಲೀಕೇಜ್​​​.. ಮನೆಯಲ್ಲಿ ಏಕಾಏಕಿ ಸಿಲಿಂಡರ್​ ಸ್ಫೋಟ.. ಮೂವರ ಸ್ಥಿತಿ ಗಂಭೀರ

Share :

15-11-2023

    ಮನೆಯಲ್ಲಿ ತಂದೆ, ತಾಯಿ ಇಲ್ಲದ ವೇಳೆ ನಡೆದ ಘಟನೆ!

    ನಗರದ ಪೊಲೀಸ್ ಠಾಣೆ ಹಿಂಭಾಗದಲ್ಲಿ ಅಗ್ನಿ ಅವಘಡ

    ಹರ್ಷಿಯಾ, ಹೇಮಾವತಿ, ರಫೀಕ್ ಗಾಯಗೊಂಡವರು!

ಚಿಕ್ಕಬಳ್ಳಾಪುರ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರೋ ಘಟನೆ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸ್ಥಿತಿ ಗಂಭೀರವಾಗಿದೆ. ಹರ್ಷಿಯಾ (16) ಹೇಮಾವತಿ (18) ಹಾಗೂ ರಫೀಕ್ (4) ಗಂಭೀರ ಗಾಯಗೊಂಡವರು.

ಮೊದಲು ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದೆ. ಗ್ಯಾಸ್ ಸೋರಿಕೆಯಾಗಿರೋದನ್ನು ಗಮನಿಸದೆ​ ಸ್ಟವ್ ಹಚ್ಚಿದ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಮನೆಯಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಓರ್ವ ಯುವತಿಯ ದೇಹದ ಮೇಲೆ ಸುಟ್ಟ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗ್ಯಾಸ್​​ ಲೀಕೇಜ್​​​.. ಮನೆಯಲ್ಲಿ ಏಕಾಏಕಿ ಸಿಲಿಂಡರ್​ ಸ್ಫೋಟ.. ಮೂವರ ಸ್ಥಿತಿ ಗಂಭೀರ

https://newsfirstlive.com/wp-content/uploads/2023/11/gas-1.jpg

Load More