newsfirstkannada.com

ಬೆಂಗಳೂರು-ಹಾಸನ-ಮಂಗಳೂರಿಗೆ ತೆರಳುವವರ ಗಮನಕ್ಕೆ.. ಶಿರಾಡಿಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಸಂಚಾರ ಸ್ಥಗಿತ

Share :

Published March 13, 2024 at 12:45pm

Update March 13, 2024 at 12:55pm

  ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

  ಎನ್‌ಎಚ್‌-75 ರಲ್ಲಿ ರಸ್ತೆ ಮಧ್ಯೆ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್​

  ಬದಲಿ ಮಾರ್ಗದಲ್ಲಿ ಸಂಚರಿಸುತ್ತಿರುವ ವಾಹನ ಸವಾರರು

ಹಾಸನ: ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ.

ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಮಗುಚಿಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

ಬೆಂಗಳೂರು-ಹಾಸನ-ಮಂಗಳೂರಿಗೆ ಹಾದು ಹೋಗುವ ರಸ್ತೆ ಇದಾಗಿದ್ದು, ಅತ್ತ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತ ಮಾಡಲಾಗಿದೆ. ಹೀಗಾಗಿ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು-ಹಾಸನ-ಮಂಗಳೂರಿಗೆ ತೆರಳುವವರ ಗಮನಕ್ಕೆ.. ಶಿರಾಡಿಘಾಟ್​​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಸಂಚಾರ ಸ್ಥಗಿತ

https://newsfirstlive.com/wp-content/uploads/2024/03/Tanker.jpg

Load More