ಮಧ್ಯ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಅನಿಲ ಸೋರಿಕೆ, ಜನರಲ್ಲಿ ಆತಂಕ
ವಾಹನಗಳ ಸಂಚಾರ ಅಸ್ತವ್ಯಸ್ತ
ಉತ್ತರ ಕನ್ನಡ: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಹೆದ್ದಾರಿಯಲ್ಲಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ಹೊನ್ನಾವರ ಪಟ್ಟಣದ ಶರಾವತಿ ಸರ್ಕಲ್ ಬಳಿ ನಡೆದಿದೆ. ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದಾಗ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಿಂದಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಮುಂಜಾಗೃತ ಕ್ರಮ ತೆಗೆದುಕೊಂಡಿದ್ದಾರೆ. ಟ್ಯಾಂಕರ್ ಪಲ್ಟಿಯಿಂದ ವಾಹನಗಳ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು, ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಯಾವುದೇ ಅನಾಹುತಗಳು ಸಂಭವಿಸದಂತೆ ಎಲ್ಲವನ್ನೂ ಸುಗಮ ಮಾಡಿಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ