/newsfirstlive-kannada/media/post_attachments/wp-content/uploads/2024/11/KL-Rahul_Gambhir_1.jpg)
ಇದೇ ತಿಂಗಳು ಎಂದರೆ ನವೆಂಬರ್ 22ನೇ ತಾರೀಕಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ ಶುರುವಾಗಲಿದೆ. ಈ ಮಹತ್ವದ ಟೆಸ್ಟ್ ಸರಣಿಗೆ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
ಬಹುನಿರೀಕ್ಷಿತ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿ 2024ರ ನವೆಂಬರ್ 22 ರಿಂದ 2025ರ ಜನವರಿ 7 ರವರೆಗೆ ನಡೆಯಲಿದೆ. ಈ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾ ಮುಖ್ಯ ಕೋಚ್ ಸುದ್ದಿಗೋಷ್ಠಿ ನಡೆಸಿ ಮಹತ್ವದ ವಿಚಾರಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ರೋಹಿತ್ ಶರ್ಮಾ ಡೌಟ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಔಟ್ ಆಗಿದ್ದಾರೆ. ಇವರು ಟೆಸ್ಟ್ ಪಂದ್ಯದಿಂದಲ್ಲೂ ಹೊರ ಉಳಿಯೋ ಸಾಧ್ಯತೆ ಇದೆ. 5 ಟೆಸ್ಟ್ ಪಂದ್ಯಗಳು ಕ್ರಮವಾಗಿ ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ. ಈ ಹೊತ್ತಲ್ಲೇ ರೋಹಿತ್ ಕೈ ಕೊಟ್ಟಿದ್ದು, ಟೀಮ್ ಇಂಡಿಯಾ ಪರ ಓಪನ್ ಮಾಡೋದ್ಯಾರು? ಅನ್ನೋ ಪ್ರಶ್ನೆಗೆ ಕೋಚ್ ಗೌತಮ್ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ.
ಗಂಭೀರ್ ಏನಂದ್ರು?
ರೋಹಿತ್ ಶರ್ಮಾ ಮೊದಲ ಟೆಸ್ಟ್ನಿಂದ ಹೊರ ಉಳಿಯುವ ಮಾತುಗಳು ಕೇಳಿ ಬಂದಿವೆ. ಹೀಗಾದ್ರೆ ನಾವೇ ಮೊದಲೇ ಯಾರು ಓಪನರ್ ಅನ್ನೋ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಮ್ಮ ಬ್ಯಾಕಪ್ ಓಪನರ್ ಆಗಿ ಕನ್ನಡಿಗ ಕೆ.ಎಲ್ ರಾಹುಲ್ ಇದ್ದಾರೆ. ನಾವು ಸಾಧ್ಯವಾದಷ್ಟು ಅತ್ಯುತ್ತಮ ಓಪನರ್ ಸೆಲೆಕ್ಟ್ ಮಾಡುತ್ತೇವೆ. ರಾಹುಲ್ಗೆ ಅಭಿಮನ್ಯು ಈಶ್ವರನ್ ಓಪನಿಂಗ್ ಮಾಡಬಹುದು. ರಣಜಿ ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧ ಅಭಿಮನ್ಯು ಈಶ್ವರನ್ ಉತ್ತಮ ಪ್ರದರ್ಶನ ನೀಡಿದ್ರು ಎಂದರು.
ಆಸ್ಪ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮ (ನಾಯಕ), ಜಸ್‌ಪ್ರಿತ್ ಬುಮ್ರಾ, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೇಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ