/newsfirstlive-kannada/media/post_attachments/wp-content/uploads/2023/10/Kohli_Rohit_123.jpg)
ಟೀಮ್ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರೋ ಏಕೈಕ ಅಭ್ಯರ್ಥಿ ಗೌತಮ್ ಗಂಭೀರ್. ಇವರು ಇಂದು ಸಂಜೆ ಮುಂಬೈನಲ್ಲಿ ಕ್ರಿಕೆಟ್ ಸಲಹಾ ಸಮಿತಿ ಎದುರು ಸಂದರ್ಶನಕ್ಕೆ ಹಾಜರಾಗಲಿದ್ದಾರೆ. ಈ ಸಂದರ್ಭದಲ್ಲಿ ಗೌತಮ್ ಗಂಭೀರ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಿದೆ.
ಸದ್ಯ ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿರೋ ರಾಹುಲ್ ದ್ರಾವಿಡ್ ಅಧಿಕಾರಾವಧಿ 2024ರ ಐಸಿಸಿ ಟಿ20 ವಿಶ್ವಕಪ್ ನಂತರ ಮುಕ್ತಾಯಗೊಳ್ಳಲಿದೆ. ಹಾಗಾಗಿ ಬಿಸಿಸಿಐ ದ್ರಾವಿಡ್ ಉತ್ತರಾಧಿಕಾರಿಗಾಗಿ ಬಹಳ ಹುಡುಕಾಟ ನಡೆಸುತ್ತಿದೆ. ದ್ರಾವಿಡ್ ಜಾಗಕ್ಕೆ ಮಾಜಿ ಎಡಗೈ ಬ್ಯಾಟರ್ ಗೌತಮ್ ಗಂಭೀರ್ ಬರಲಿದ್ದಾರೆ.
ಈ ಹಿಂದೆ ಮೇ ತಿಂಗಳಲ್ಲೇ ಬಿಸಿಸಿಐ ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿತ್ತು. ಐಪಿಎಲ್ ಫೈನಲ್ ಮುಗಿದ ಕೂಡಲೇ ಈ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಕೊನೆಗೂ ಟೀಮ್ ಇಂಡಿ ಮುಖ್ಯ ಕೋಚ್ ಅನೌನ್ಸ್ ಮಾಡೋ ಟೈಮ್ ಬಂದೇಬಿಟ್ಟಿದೆ.
ಗೌತಮ್ ಗಂಭೀರ್ 2024ರ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿದ್ದಾರೆ. ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮಾಜಿ ಕ್ಯಾಪ್ಟನ್ ಕೊಹ್ಲಿಗೂ ಗಂಭೀರ್ ಆಪ್ತರು.
ಇದನ್ನೂ ಓದಿ:ಬಿಸಿಸಿಐಗೆ ಬಿಗ್ ಶಾಕ್ ಕೊಟ್ಟ ಗಂಭೀರ್.. ಷರತ್ತುಗಳಿಗೆ ಬೆಚ್ಚಿಬಿದ್ದ ಬಿಗ್ಬಾಸ್..!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ