newsfirstkannada.com

×

Share :

Published June 4, 2023 at 9:35am

    ಮತ್ತೊಮ್ಮೆ ಮದ್ವೆಯಾದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಂದ್ರಪ್ರಭ

    ಮನದರಸಿ ಬಗ್ಗೆ ಹಾಸ್ಯ ಕಲಾವಿದ ಚಂದ್ರಪ್ರಭ ಹೇಳಿದ್ದೇನು ಗೊತ್ತಾ?

    ‘ಗಿಚ್ಚಿ ಗಿಲಿಗಿಲಿ 2’ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಚಂದ್ರಪ್ರಭ ಮರು ಲಗ್ನ

ಕಿರುತೆರೆ ಜನಪ್ರಿಯ ಶೋ ಮಜಾಭಾರತ ಹಾಗೂ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಂದ್ರಪ್ರಭ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿರೋ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದವು. ಇದೀಗ ಎಲ್ಲರ ಸಮ್ಮುಖದಲ್ಲಿ ಹಾಸ್ಯ ಕಲಾವಿದ ಚಂದ್ರಪ್ರಭ ಮತ್ತೊಮ್ಮೆ ಮದುವೆ ಆಗಿದ್ದಾರೆ.

ಹಾಸ್ಯ ನಟ ಚಂದ್ರಪ್ರಭ ತಾವು ಮದುವೆಯಾದ ಬಗ್ಗೆ ಎಲ್ಲೂ ಹೇಳದೇ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ‘ಗಿಚ್ಚಿ ಗಿಲಿಗಿಲಿ 2’ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಚಂದ್ರಪ್ರಭ ಅವರು ಮತ್ತೆ ಪ್ರೀತಿಯ ಮಡದಿ ಭಾರತಿ ಪ್ರಿಯಾ ಜೊತೆ ಮದುವೆಯಾಗಿದ್ದಾರೆ. ನಾನು ಇಷ್ಟಪಟ್ಟ ಹುಡುಗಿ ಎಂದು ಹೇಳುವುದ್ದಕ್ಕಿಂತ, ನನ್ನನ್ನು ಹೆಚ್ಚಿಗೆ ಇಷ್ಟಪಡುತ್ತಿರುವ ವ್ಯಕ್ತಿ ಎಂದು ಹೇಳಲು ಖುಷಿಯಾಗುತ್ತದೆ. ಆಕೆ ಯಾವ ಕಾರಣಕ್ಕೂ ಕಣ್ಣೀರು ಹಾಕಿಸದಂತೆ ನೋಡಿಕೊಳ್ಳಬೇಕು ಅನ್ನೋದು ನನ್ನ ಆಸೆ ಎಂದು ಚಂದ್ರಪ್ರಭ ವೇದಿಕೆ ಮೇಲೆ ಭಾವುಕರಾಗಿ ಮಾತನಾಡಿದ್ದಾರೆ.

ಹಾಸ್ಯ ನಟ ಚಂದ್ರಪ್ರಭ ಅವರು ತಮ್ಮ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋವನ್ನು ಶೇರ್​​ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ನಿಮಗೆ ಒಳ್ಳೆಯದಾಗಲಿ ಎಂದು ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by Chandraprabha G (@chandra_prabha_g)

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

Load More