Advertisment

ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಸುಷ್ಮಿತಾ-ಜಗ್ಗಪ್ಪ

author-image
Veena Gangani
Updated On
ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಸುಷ್ಮಿತಾ-ಜಗ್ಗಪ್ಪ
Advertisment
  • ಮಜಾ ಭಾರತ ಹಾಗೂ ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಟ ಹಾಗೂ ನಟಿ ಮದುವೆ
  • ಗುರು ಹಿರಿಯರ ಸಮ್ಮುಖದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಸ್ಟಾರ್​​ ಜೋಡಿ
  • ಈ ಸ್ಟಾರ್​ ಜೋಡಿ ಮದುವೆಗೆ ಹಿರಿತೆರೆ ಹಾಗೂ ಕಿರುತೆರೆ ಕಲಾವಿದರು ಭಾಗಿ

ಕಿರುತೆರೆ ಜನಪ್ರಿಯ ಶೋ ಮಜಾ ಭಾರತ ಹಾಗೂ ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಟಿ ಸುಷ್ಮಿತಾ ಮತ್ತು ಜಗ್ಗಪ್ಪ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Advertisment

ನಟಿ ಸುಷ್ಮಿತಾ ಮತ್ತು ಜಗ್ಗಪ್ಪ ಜೊತೆ ಜೊತೆಯಾಗಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು. ಕೆಲವೊಂದು ಶೋಗಳಲ್ಲಿ ಅನೇಕ ಬಾರಿ ಗಂಡ ಹೆಂಡತಿಯಾಗಿಯೇ ಪಾತ್ರ ನಿರ್ವಹಿಸಿದ್ದರು. ಈ ಇಬ್ಬರು ತಮ್ಮ ಅದ್ಭುತ ನಟನೆ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.

publive-image

ಇದೀಗ ಗುರು ಹಿರಿಯರ ಸಮ್ಮುಖದಲ್ಲಿ ಈ ಸ್ಟಾರ್​ ಜೋಡಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹಲವು ದಿನಗಳಿಂದ ಜಗ್ಗಪ್ಪ ಮತ್ತು ಸುಷ್ಮಿತಾ ಲವ್ ಮಾಡುತ್ತಿದ್ದಾರೆ ಎನ್ನುವ ಗಾಸಿಪ್ ಇತ್ತು. ಆದರೆ ಈ ಜೋಡಿ ಹಾಗೇನು ಇಲ್ಲ ಎಂದು ಅದನ್ನು ತಳ್ಳಿ ಹಾಕಿದ್ದರು. ಇದೀಗ ನಟ ಜಗ್ಗಪ್ಪನ ಜೊತೆ ಸುಷ್ಮಿತಾ ಅವರು ಮದುವೆಯಾಗಿದ್ದಾರೆ.

Advertisment

publive-image

ಇನ್ನು, ಈ ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ಫೋಟೋಗಳನ್ನು ನೋಡಿದ ನೆಟ್ಟಿಗರು ಜಗ್ಗಪ್ಪನ ಜೊತೆ ಸುಷ್ಮಿತಾ ಶುಭಾಶಯದ ಮಹಾಪೂರವೇ ಹರಿದು ಬರುತ್ತಿವೆ. ನಟ ಜಗ್ಗಪ್ಪ ಹಾಗೂ ಸುಷ್ಮಿತಾ ಅವರ ಮದುವೆಗೆ ಹಿರಿತೆರೆ ಹಾಗೂ ಕಿರುತೆರೆ ಕಲಾವಿದರು ಭಾಗಿಯಾಗಿ ಶುಭ ಹಾರೈಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment