/newsfirstlive-kannada/media/post_attachments/wp-content/uploads/2024/07/CTR_GIRL_DEAD_1.jpg)
ಚಿತ್ರದುರ್ಗ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹಳವುದರ ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಮತ್ತು ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14) ಮೃತಪಟ್ಟ ಬಾಲಕಿ. ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ ಬಾಲಕಿ 8ನೇ ತರಗತಿ ಓದುತ್ತಿದ್ದಳು. ಆದರೆ ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಹಲವು ಅನುಮಾನ ಉಂಟು ಮಾಡಿದ್ದು ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಶಂಕೆ ವ್ಯಕ್ತಪಡಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಭರಮಸಾಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಮೃತದೇಹವನ್ನು ಸಿರಿಗೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ