/newsfirstlive-kannada/media/post_attachments/wp-content/uploads/2025/03/Glenn-Maxwell.jpg)
ಇಂದು ನರೇಂದ್ರ ಮೋದಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ 2025ರ ಇಂಡಿಯನ್ ಪ್ರೀಮಿಯರ್ ಲೀಗ್ 5ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿ ಆಗಿವೆ.
ಕೈ ಕೊಟ್ಟ ಮ್ಯಾಕ್ಸ್‌ವೆಲ್
ಟಾಸ್ ಸೋತ್ರೂ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ನಲ್ಲಿ 5 ವಿಕೆಟ್ಗೆ ಬರೋಬ್ಬರಿ 243 ರನ್ ಕಲೆ ಹಾಕಿದೆ. ಆದರೆ, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಡಕೌಟ್ ಆಗಿದ್ದಾರೆ. ಈ ಮೂಲಕ ತನ್ನ ಮೇಲಿಟ್ಟ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.
ದುಬೈನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಪಂಜಾಬ್ ತಂಡದ ಪಾಲಾಗಿದ್ದರು. ಪಂಜಾಬ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ಮ್ಯಾಕ್ಸಿ ಖರೀದಿಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಪಂಜಾಬ್ ಕಿಂಗ್ಸ್ 4.20 ಕೋಟಿ ನೀಡಿ ಮ್ಯಾಕ್ಸಿ ಅವರನ್ನು ಖರೀದಿಸಿತ್ತು. ಇವರ ಮೇಲೆ ಭಾರೀ ನಿರೀಕ್ಷೆ ಇತ್ತು.
ಆರ್ಸಿಬಿ ಪರ ಕಳಪೆ ಪ್ರದರ್ಶನ
2021ರ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಅವರನ್ನು 14.25 ಕೋಟಿ ರೂಪಾಯಿ ನೀಡಿ ಆರ್ಸಿಬಿ ಖರೀದಿ ಮಾಡಿತ್ತು. 2023ರ ಐಪಿಎಲ್‌ನಲ್ಲಿ 400 ರನ್ ಗಳಿಸಿದ್ದ ಮ್ಯಾಕ್ಸಿ ಕಳೆದ ಸೀಸನ್ 2024ರ ಐಪಿಎಲ್‌ನಲ್ಲಿ ಕೇವಲ 52 ರನ್ ಗಳಸಿದರು. ಈ ಮೂಲಕ ಆರ್ಸಿಬಿಗೆ ಮ್ಯಾಕ್ಸ್‌ವೆಲ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ರು.
ಇದನ್ನೂ ಓದಿ:ಆರ್ಸಿಬಿ ತಂಡದ ಮಾಜಿ ಸ್ಟಾರ್ ಆಟಗಾರ ಮ್ಯಾಕ್ಸಿಗೆ ಬಿಗ್ ಶಾಕ್; ತಂಡದಲ್ಲಿ ಚಾನ್ಸ್ ಸಿಗೋದು ಡೌಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ