Advertisment

ಗೋವಾದಲ್ಲಿ ಗೋಬಿ ಮಂಚೂರಿ ಬ್ಯಾನ್! ನಿಯಮ ಉಲ್ಲಂಘಿಸಿ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು; ಯಾಕೆ?

author-image
AS Harshith
Updated On
ಗೋವಾದಲ್ಲಿ ಗೋಬಿ ಮಂಚೂರಿ ಬ್ಯಾನ್! ನಿಯಮ ಉಲ್ಲಂಘಿಸಿ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು; ಯಾಕೆ?
Advertisment
  • ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ
  • ಕಡಿಮೆ ಬೆಲೆಯ ಸಾಸ್​ನಿಂದ ಆರೋಗ್ಯದ ಮೇಲೆ ಪರಿಣಾಮ
  • ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ದಾಖಲಾಗಿದ್ವು

ಗೋಬಿ ಮಂಚೂರಿಯನ್ ತಿನಿಸು ಬಹುತೇಕರಿಗೆ ಇಷ್ಟ. ಹೀಗಾಗಿ ಭಾರತದ ಯಾವುದೇ ನಗರ, ಪಟ್ಟಣಕ್ಕೆ ತೆರಳಿದರೂ ಗೋಬಿ ಮಂಚೂರಿಯನ್ ಬಾರಿ ಬೇಡಿಕೆ ಇದೆ. ಮಕ್ಕಳಿಂದ ಹಿಡಿದು ಎಲ್ಲರಿಗೂ ಗೋಬಿ ಮಂಚೂರಿಯನ್ ನೆಚ್ಚಿನ ತಿನಿಸು. ಆದರೆ ಭಾರತದ ಜನಪ್ರಿಯ ಪ್ರವಾಸಿ ನಗರ ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಿದೆ.

Advertisment

ಹೌದು, ಗೋವಾದ ಮಪುಸಾ ನಗರದಲ್ಲಿ ಯಾರೂ ಗೋಬಿ ಮಂಚೂರಿಯನ್ ಮಾರಾಟ ಮಾಡುವಂತಿಲ್ಲ. ಗೋವಾದ ಮಪುಸಾ ಮುನ್ಸಿಪಲ್ ಕಾರ್ಪೋರೇಶನ್ ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಯಾವುದೇ ಕಾರಣಕ್ಕೂ ಗೋವಾದ ಮಪುಸಾ ಮುನ್ಸಿಪಲ್ ವ್ಯಾಪ್ತಿಯಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವಂತಿಲ್ಲ. ಒಂದ್ವೇಳೆ ಮಾರಾಟ ಮಾಡಿದ್ರೆ, ನಿಯಮ ಉಲ್ಲಂಘಿಸಿ ಗೋಬಿ ಮಂಚೂರಿಯನ್ ಮಾರಾಟ ಮಾಡಿದರೆ, ದುಬಾರಿ ದಂಡದ ಜೊತೆಗೆ ವ್ಯಾಪಾರದ ಲೈಸೆನ್ಸ್ ಕೂಡ ರದ್ದಾಗಲಿದೆ.

publive-image

ಆಹಾರ ಇಲಾಖೆ ದಾಳಿ 

ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್​ನಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ, ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ದಾಖಲಾಗಿದ್ವು. ಈ ಬಗ್ಗೆ ಆಹಾರ ಇಲಾಖೆ ದಾಳಿ ನಡೆಸಿ ನೋಟಿಸ್ ನೀಡಿತ್ತು. ಆದರೆ ಈ ನೋಟಿಸ್‌ಗೆ ಯಾರೂ ಕೂಡ ತಲೆ ಕೆಡಿಸಿಕೊಂಡಿರಲಿಲ್ಲ

ಗೋವಾದ ಮಪುಸಾ ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುವ ನಗರ. ಕಳೆದ ಹಲವು ವರ್ಷಗಳಿಂದ ಮಪುಸಾ ಆಹಾರ ಇಲಾಖೆ ಫಾಸ್ಟ್ ಫುಡ್ ಸೆಂಟರ್, ಸ್ಟಾಲ್‌ಗಳಿಗೆ ನೋಟಿಸ್ ನೀಡುತ್ತಲೇ ಬಂದಿತ್ತು. ಯಾರೂ ಎಚ್ಚೆತ್ತುಕೊಳ್ಳದ ಹಿನ್ನೆಲೆ ಇದೀಗ ಗೋಬಿ ಮಂಚೂರಿಯನ್ ನಿಷೇಧಿಸಿದೆ..

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment