/newsfirstlive-kannada/media/post_attachments/wp-content/uploads/2024/08/Ramya.jpg)
ಮಂಡ್ಯ: ಗೋಲ್ಡ್ ಮೆಡಲ್ ಪದವೀಧರೆ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24) ಮೃತ ಯುವತಿ.
ರೈಲು ನಿಲ್ದಾಣದ ರೈಲ್ವೆ ಮೇಲ್ಸೇತುವೆ ಬಳಿ ಹಳಿ ದಾಟುವ ವೇಳೆ ದುರ್ಘಟನೆ ನಡೆದಿದೆ. ರೈಲ್ವೆ ಹಳಿ ದಾಟುವ ವೇಳೆ ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ರಮ್ಯ ಸಾವನ್ನಪ್ಪಿದ್ದಾಳೆ.
ಹಂಪಿ ಎಕ್ಸ್‌ಪ್ರೆಸ್ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಅವಘಡ ನಡೆದಿದೆ. ರೈಲಿಗೆ ಸಿಲುಕಿದ ಯುವತಿಯ ದೇಹ ಛಿದ್ರಗೊಂಡಿದೆ.
ರಮ್ಯಾ ಎಂಕಾಂನಲ್ಲಿ ಚಿನ್ನದ ಪದಕ ಪಡೆದಿದ್ದಳು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: 62 ಜನರ ಬಲಿ ಪಡೆದ ವಿಮಾನ.. ನೋಡ ನೋಡ್ತಿದ್ದಂತೆ ಜಸ್ಟ್ 5 ಸೆಕೆಂಡ್​ನಲ್ಲಿ ನೆಲಕ್ಕೆ ಬಿದ್ದ ಫ್ಲೈಟ್- ವಿಡಿಯೋ
ಸ್ಥಳಕ್ಕೆ ಮಂಡ್ಯ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಬಳಿಕ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ