newsfirstkannada.com

ಮೆಟ್ರೋದಲ್ಲಿ ಓಡಾಡೋರಿಗೆ ಗುಡ್​ನ್ಯೂಸ್​.. ಬೆಂಗಳೂರಿಗರು ಓದಲೇಬೇಕಾದ ಸ್ಟೋರಿ ಇದು!

Share :

Published March 14, 2024 at 10:31pm

    ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್​ ಕೊಟ್ಟ ಸಿಎಂ ಸಿದ್ದರಾಮಯ್ಯ

    ಸದ್ಯದಲ್ಲೇ ಈ ಮಾರ್ಗಗಳಲ್ಲೂ ನಮ್ಮ ಮೆಟ್ರೋ ಸಂಚಾರ ಎಂದ ಸಿಎಂ

    ಬೆಂಗಳೂರಿಗರು ಓದಲೇಬೇಕಾದ ಪ್ರಮುಖ ಮೆಟ್ರೋ ಸ್ಟೋರಿ ಇದು!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರೋ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ವಾಹನ ದಟ್ಟಣೆ ನಿವಾರಿಸುವ ಪರಿಣಾಮಕಾರಿ ಮಾರ್ಗವೆಂದರೆ ಮೆಟ್ರೋ ವ್ಯವಸ್ಥೆ. ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿಕೊಂಡು ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದಿದ್ದಾರೆ.

44.65 ಕಿ.ಮೀ ಉದ್ದದ ಎರಡು ಕಾರಿಡಾರ್‌ಗಳಾದ ಕಾರಿಡಾರ್-1 ಜೆ.ಪಿ ನಗರ 4ನೇ ಹಂತದಿಂದ ಪಶ್ಚಿಮ ಹೊರವರ್ತುಲ ರಸ್ತೆಯುದ್ದಕ್ಕೂ ಕೆಂಪಾಪುರದವರೆಗೆ 32.15 ಕಿ.ಮೀ. ಹಾಗೂ ಕಾರಿಡಾರ್ -2 ಹೊಸಹಳ್ಳಿಯಿಂದ ಮಾಗಡಿ ರಸ್ತೆಯುದ್ದಕ್ಕೂ ಕಡಬಗೆರೆವರೆಗೆ 12.50 ಕಿ.ಮೀ ಒಟ್ಟು ಅಂದಾಜು ವೆಚ್ಚ ರೂ.15,611 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಇನ್ನು, ಈ ಯೋಜನೆಯ ಶೇ.85 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಉಳಿದ ಅನುದಾನವನ್ನು ಕೇಂದ್ರ ನೀಡಲಿದೆ. ನಗರದಲ್ಲಿ ಜನರ ಓಡಾಟಕ್ಕೆ ಉತ್ತಮ ಸಂಪರ್ಕ ಒದಗಿಸುವ ದಿಸೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೆಟ್ರೋದಲ್ಲಿ ಓಡಾಡೋರಿಗೆ ಗುಡ್​ನ್ಯೂಸ್​.. ಬೆಂಗಳೂರಿಗರು ಓದಲೇಬೇಕಾದ ಸ್ಟೋರಿ ಇದು!

https://newsfirstlive.com/wp-content/uploads/2023/11/namma-metro-1.jpg

Load More