ರಾಜ್ಯ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ
7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ನಿರ್ಣಯ
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಮಾಡಲಾಗಿದೆ. ಈ ಮೂಲಕ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ.
ನ್ಯೂಸ್ಫಸ್ಟ್ಗೆ ಸಿಕ್ಕಿರೋ ಮಾಹಿತಿ ಪ್ರಕಾರ ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡಿದ್ದು, ಆಗಸ್ಟ್ 1 ರಿಂದ ಅನ್ವಯವಾಗಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ.10.5 ವೇತನ ಹೆಚ್ಚಳ ಆಗಬೇಕಿದೆ.
ಇದನ್ನೂ ಓದಿ: ನಾಳೆ ರೆಡ್ ಅಲರ್ಟ್.. ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಭಾರೀ ಮಳೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ