ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣ ಇಲಾಖೆ ದಾರಿದೀಪ
ಫೇಲ್ ಆಗುವ ವಿದ್ಯಾರ್ಥಿಗಳಿಗಾಗಿ ಮಹತ್ವದ ನಿರ್ಧಾರ
ಹೀಗೆ ಮಾಡಿದರೆ ಅಮೂಲ್ಯ ಒಂದು ವರ್ಷ ಉಳಿಯಲಿದೆ
ಬೆಂಗಳೂರು: SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಇದು ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ವರದಾನವಾಗಲಿದೆ. ಡ್ರಾಪ್ ಔಟ್ ಸಮಸ್ಯೆಗೂ ಮುಕ್ತಿ ಹಾಡಲಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೂ ದಾರಿಯಾಗಲಿದೆ. ಜೊತೆಗೆ ಅಮೂಲ್ಯ ಒಂದು ವರ್ಷ ಉಳಿಯಲಿದೆ. ಇನ್ನು ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ಪಾಸ್ ಆಗಲು ಎರಡೆರಡು ಅವಕಾಶ ಸಿಗಲಿದೆ.
ಎಸ್ಸೆಸ್ಸೆಲ್ಸಿ ಹಾಗೂ ಸೆಕೆಂಡ್ ಪಿಯುಸಿಯಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಗಲಿದೆ. 2 ಬಾರಿ ಸಪ್ಲಿಮೆಂಟರಿ ಎಕ್ಸಾಂ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆದರೆ 15 ದಿನದಲ್ಲಿ ಪೂರಕ ಪರೀಕ್ಷೆ ಮಾಡಲಾಗುತ್ತಿದೆ. ಇದನ್ನು ವಿಸ್ತರಿಸಿ ಪೂರಕ ಪರೀಕ್ಷೆಯಲ್ಲಿ ಫೇಲಾದರೆ 15 ದಿನದಲ್ಲಿ ಮತ್ತೊಂದು ಪರೀಕ್ಷೆಗೆ ಅವಕಾಶ ನೀಡಿ, ಫೇಲ್ ಆದವರಿಗೆ 2ನೇ ಬಾರಿ ಅವಕಾಶ ಮಾಡಿ ಕೊಡೋದೆ ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ.
ಈ ಬಗ್ಗೆ ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶಿಕ್ಷಣ ಕ್ಷೇತ್ರದ ಪ್ರಮುಖರೊಂದಿಗೆ ಚರ್ಚೆ ನಡೆಸಿ, ರೂಪುರೇಷೆಗಳು, ಪರೀಕ್ಷಾ ಕ್ರಮಗಳ ಬಗ್ಗೆ ಕರಡು ಸಿದ್ಧಪಡಿಸುವಂತೆ ನಿರ್ದೇಶಿಸಿದ್ದಾರಂತೆ. ಇಲ್ಲಿಯವರೆಗೆ ಪೂರಕ ಪರೀಕ್ಷೆಯಲ್ಲಿಯೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾದರೆ ಒಂದು ವರ್ಷ ಕಾಯಬೇಕಿತ್ತು. ಇದರಿಂದ ಒಂದು ವರ್ಷ ವ್ಯರ್ಥವಾಗುವುದು ಮಾತ್ರವಲ್ಲದೆ, ಕೆಲವರು ಶಿಕ್ಷಣವನ್ನೇ ಅರ್ಧದಲ್ಲಿ ಮೊಟಕುಗೊಳಿಸುತ್ತಿದ್ರು. ಈ ನಿಟ್ಟಿನಲ್ಲಿ ಹೊಸ ಪರೀಕ್ಷಾ ಕ್ರಮ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಆದ್ರೆ ಶಿಕ್ಷಣ ತಜ್ಞರು ಹಾಗೂ ಉಪನ್ಯಾಸಕರಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ