/newsfirstlive-kannada/media/post_attachments/wp-content/uploads/2024/10/Team-India-2.jpg)
ಬ್ರಿಸ್ಬೇನ್‌ನಲ್ಲಿ ನಡೆದ ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಮಳೆ ದಯೆ ತೋರದ ಕಾರಣ ಬ್ರಿಸ್ಬೇನ್ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶ ಕಾಣಲಿಲ್ಲ. 4ನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಸಿಕ್ಕಿದೆ.
ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಮುಂದಿನ 2 ಟೆಸ್ಟ್ ಪಂದ್ಯಗಳು ಗೆಲ್ಲಲೇಬೇಕಿದೆ. ಹಾಗಾಗಿ 4ನೇ ಟೆಸ್ಟ್ ಪಂದ್ಯ ಭಾರತ ತಂಡಕ್ಕೆ ಮಾಡು ಇಲ್ಲವೆ ಮಡಿ ಎನ್ನುವಂತಾಗಿದೆ. ಈ ಹೊತ್ತಲ್ಲೇ ಭಾರತ ತಂಡಕ್ಕೆ ಪ್ರತಿ ಪಂದ್ಯದಲ್ಲೂ ಆಸ್ಟ್ರೇಲಿಯಾದ ಈ ಆಟಗಾರ ಕಾಡುತ್ತಿದ್ದಾರೆ. ಅವರು ಮತ್ಯಾರು ಅಲ್ಲ, ಭಾರತ ತಂಡದ ದೊಡ್ಡ ಶತ್ರು ಎಂದು ಕರೆಸಿಕೊಳ್ಳೋ ಟ್ರಾವಿಸ್ ಹೆಡ್. ಹೆಡ್ ಮುಂದಿನ ಟೆಸ್ಟ್ ಆಡೋದು ಡೌಟ್ ಆಗಿದೆ.
ಆಸೀಸ್ಗೆ ಕೈ ಕೊಟ್ಟ ಹೆಡ್
ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಇವರು 3ನೇ ಟೆಸ್ಟ್ ಪಂದ್ಯದಲ್ಲಿ ತೀವ್ರ ಗಾಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಆಡುವುದು ಅನುಮಾನವಾಗಿದೆ. ಈ ಬಗ್ಗೆ ಸ್ವತಃ ಹೆಡ್ ಮಾಹಿತಿ ನೀಡಿದ್ದಾರೆ.
ಸದ್ಯ ನಡೆಯುತ್ತಿರೋ ಟೆಸ್ಟ್ ಸರಣಿಯಲ್ಲಿ ಟ್ರಾವಿಸ್ ಹೆಡ್ ತಮ್ಮ ಅಬ್ಬರ ಮುಂದುವರೆಸಿದ್ದಾರೆ. ಇವರು ಈ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಪರ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್. ಹೆಡ್ ಆಡಿರೋ 3 ಟೆಸ್ಟ್ ಪಂದ್ಯಗಳಲ್ಲಿ 81.80 ಸರಾಸರಿಯಲ್ಲಿ 409 ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಎರಡು ಅಮೋಘ ಶತಕಗಳು ಸೇರಿವೆ.
ಇದನ್ನೂ ಓದಿ:ಕನ್ನಡಿಗನಿಗಾಗಿ ತನ್ನ ಕ್ರಿಕೆಟ್ ಕರಿಯರ್ ಅನ್ನೇ ತ್ಯಾಗ ಮಾಡಿದ R ಅಶ್ವಿನ್; ಕೊಟ್ಟ ಮಾತು ಉಳಿಸಿಕೊಂಡ್ರು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ