/newsfirstlive-kannada/media/post_attachments/wp-content/uploads/2024/01/Pant_KL-Rahul.jpg)
ಇಂಗ್ಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಟಿ20 ಸರಣಿಯಲ್ಲಿ 4-1 ಅಂತರದಲ್ಲಿ ಗೆಲುವು ಸಾಧಿಸಿರೋ ಟೀಮ್ ಇಂಡಿಯಾ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಫೆಬ್ರವರಿ 6 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಇದು ಭಾರೀ ಮಹತ್ವ ಪಡೆದುಕೊಂಡಿದೆ. ಭಾರತ ಹಿರಿಯ ಆಟಗಾರರು ಫಾರ್ಮ್‌ಗೆ ಮರಳುವ ಉತ್ಸಾಹದಲ್ಲಿದ್ದಾರೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಈ ಸರಣಿ ಬಹಳ ಮುಖ್ಯವಾಗಿದೆ. ಕಳೆದ ಕೆಲವು ತಿಂಗಳಿನಿಂದ ಫಾರ್ಮ್‌ಗೆ ಮರಳಲು ಹೆಣಗಾಡುತ್ತಿರೋ ಇವರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ರನ್ ಕಲೆ ಹಾಕಲೇಬೇಕಿದೆ. ಇಬ್ಬರೂ ಇತ್ತೀಚೆಗೆ ರಣಜಿ ಪಂದ್ಯವನ್ನು ಆಡಿದರೂ ರನ್ ಗಳಿಸಲು ವಿಫಲವಾಗಿದ್ದು, ಅದರಲ್ಲೂ ಕೊಹ್ಲಿ ಫಾರ್ಮ್ ಟೀಮ್ ಇಂಡಿಯಾಗೆ ಸಮಸ್ಯೆ ಆಗಿದೆ. ಇದರ ಮಧ್ಯೆ ಟೀಮ್ ಇಂಡಿಯಾ ಸ್ಟಾರ್ ಆಟಗಾರನಿಗೆ ಬಿಗ್ ಶಾಕ್ ಕಾದಿದೆ.
ಟೀಮ್ ಇಂಡಿಯಾ ಒನ್ ಡೇ ಸೀರೀಸ್ನಲ್ಲೂ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿಯಲು ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾದಲ್ಲಿ ರಿಷಬ್ ಪಂತ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಇವರಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಚಾನ್ಸ್ ಸಿಗುತ್ತಾ? ಇಲ್ಲವಾ? ಅನ್ನೋ ಚರ್ಚೆ ಜೋರಾಗಿದೆ.
ಪಂತ್ ಬದಲಿಗೆ ರಾಹುಲ್ಗೆ ಅವಕಾಶ
ಇನ್ನು, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಪಂತ್ ಬದಲಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿದೆ. ಕೆ.ಎಲ್ ರಾಹುಲ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿರೋ ಕಾರಣ ಪಂತ್ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಆಡೋದು ಡೌಟ್ ಆಗಿದೆ.
ಭಾರತ ತಂಡದ ಆಟಗಾರರು ಕಳಪೆ ಫಾರ್ಮ್ನಲ್ಲಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಯಾವಾಗ ಬೇಕಾದ್ರೂ ಕೈ ಕೊಡಬಹುದು. ಹಾಗಾಗಿ ಪಂತ್ ತಂಡದಲ್ಲಿ ಹೆಚ್ಚುವರಿ ಬ್ಯಾಟರ್ ಆಗಿದ್ರೆ, ಟೀಮ್ ಇಂಡಿಯಾಗೆ ಆನೆಬಲ ಇದ್ದಂಗೆ. ಅಗತ್ಯ ಬಿದ್ದರೆ ಪಂತ್ ಬೌಲಿಂಗ್ ಕೂಡ ಮಾಡಬಲ್ಲರು. ಆದರೆ, ಪಂತ್ಗೆ ಅವಕಾಶ ಸಿಗೋದು ಕಷ್ಟ ಎನ್ನುತ್ತಿವೆ ಮೂಲಗಳು.
ಇದನ್ನೂ ಓದಿ:ಈ ಮೂರು ಕಾರಣಗಳಿಗಾಗಿ ಪಂತ್ ಟೀಮ್ ಇಂಡಿಯಾ ಪರ ಆಡಲೇಬೇಕು; ಏನವು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us