ಗಂಭೀರವಾಗಿ ಗಾಯಗೊಂಡವರನ್ನ ಖಾಸಗಿ ಆಸ್ಪತ್ರೆಗೆ ದಾಖಲು
ತಿ.ನರಸೀಪುರ ಮುಖ್ಯರಸ್ತೆಯ ಮೇಗಳಾಪುರ ಬಳಿ ಘಟನೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ವಾಹನ
ಮೈಸೂರು: ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ಗೂಡ್ಸ್ ವಾಹನ ಪಲ್ಟಿಯಾಗಿರೋ ಘಟನೆ ತಿ.ನರಸೀಪುರ ಮುಖ್ಯರಸ್ತೆಯ ಮೇಗಳಾಪುರ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. ದರ್ಶನ್ (20) ಮೃತ ಯುವಕ.
ಮಲೆ ಮಹದೇಶ್ವರ ಬೆಟ್ಟಕ್ಕೆಂದು ಗೂಡ್ಸ್ ವಾಹನದಲ್ಲಿ ಸ್ನೇಹಿತರೆಲ್ಲಾ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಸುಮಾರು 10 ಯುವಕರಿಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವರುಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ