newsfirstkannada.com

ಫಾರ್ಚುನರ್, ಬೊಲೆರೊ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Share :

24-06-2023

  ಕಾರು ಮತ್ತು ಗೂಡ್ಸ್ ವಾಹನ ನಡುವೆ ಡಿಕ್ಕಿ, ಇಬ್ಬರು ಸಾವು

  ಆಂಧ್ರಪ್ರದೇಶದ ಚೀಲಮತ್ತೂರು ಬಳಿ ನಡೆದ ಭೀಕರ ಅಪಘಾತ

  ಅತೀ ವೇಗವಾಗಿ ಬಂದ ಕಾರು ಬೊಲೆರೊ ಗೂಡ್ಸ್ ಗಾಡಿಗೆ ಡಿಕ್ಕಿ

ಚಿಕ್ಕಬಳ್ಳಾಪುರ: ಕಾರು ಮತ್ತು ಮಹೀಂದ್ರ ಬೊಲೆರೊ ಗೂಡ್ಸ್ ಗಾಡಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿರೋ ಘಟನೆ ಆಂಧ್ರ ಪ್ರದೇಶದ ಚೀಲಮತ್ತೂರು ಬಳಿ ನಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಫಾರ್ಚುನರ್ ಕಾರು ಬಾಗೇಪಲ್ಲಿಯ ವೆಂಕಟೇಶ್ ಎಂಬುವವರಿಗೆ ಸೇರಿದೆ ಎಂದು ತಿಳಿದು ಬಂದಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚೀಲಮತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಹಿಂದೂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ. ಫಾರ್ಚುನರ್ ವಾಹನದ ಅತೀ ವೇಗವಾಗಿ ಬಂದಿದ್ದಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಫಾರ್ಚುನರ್, ಬೊಲೆರೊ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

https://newsfirstlive.com/wp-content/uploads/2023/06/accident-34.jpg

Load More