/newsfirstlive-kannada/media/post_attachments/wp-content/uploads/2024/06/MND-BUS-ACCIDENT.jpg)
ಮಂಡ್ಯ: ಸರ್ಕಾರಿ ಬಸ್ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೆ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.
ಇದನ್ನೂ ಓದಿ: ಮದುವೆ ನಿರಾಕರಣೆ.. ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ
ಬಸ್ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ