newsfirstkannada.com

Breaking: ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​.. ಪ್ರಯಾಣಿಕರಿಗೆ ಗಂಭೀರ ಗಾಯ

Share :

Published June 29, 2024 at 1:29pm

Update June 29, 2024 at 1:33pm

    KSRTC ಬಸ್​​ ಅಪಘಾತ.. ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​

    ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅವಘಡ

    30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​, ಸ್ಥಳೀಯರಿಂದ ರಕ್ಷಣೆ

ಮಂಡ್ಯ: ಸರ್ಕಾರಿ ಬಸ್​ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್​ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೆ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

ಇದನ್ನೂ ಓದಿ: ಮದುವೆ ನಿರಾಕರಣೆ.. ವಾಟ್ಸಪ್​ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ಬಸ್​ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ನ್ಯೂಸ್​ಫಸ್ಟ್​ಗೆ ಲಭಿಸಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​.. ಪ್ರಯಾಣಿಕರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/06/MND-BUS-ACCIDENT.jpg

Load More