/newsfirstlive-kannada/media/post_attachments/wp-content/uploads/2024/12/manmohan-singh13.jpg)
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ಸಜ್ಜನ ರಾಜಕಾರಣಿ, ಅರ್ಥಶಾಸ್ತ್ರಜ್ಞ, ಹಿರಿಯ ನಾಯಕರ ಅಗಲಿಕೆಯ ಹಿನ್ನೆಲೆ ದೇಶಾದ್ಯಂತ ಸಂತಾಪ ಸೂಚಿಸಲಾಗುತ್ತಿದೆ.
ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ನಾಳೆ ಅಂದ್ರೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಕೂಡ ಘೋಷಿಸಲಾಗಿದೆ.
ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ ರದ್ದು; ದೆಹಲಿಗೆ ಹೊರಟ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ನಾಯಕರು ವಿಶೇಷ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ