/newsfirstlive-kannada/media/post_attachments/wp-content/uploads/2025/01/Cm-Siddaramaiah.jpg)
ಬೆಂಗಳೂರು: ಕನ್ನಡದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಮುದ್ರಿಸಲು ಆದೇಶಿಸಿದೆ.
ಆದೇಶ ಪ್ರತಿಯಲ್ಲೇನಿದೆ?
ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರಬೇಕು ಎಂದು ಆದೇಶದ ಪ್ರತಿಯಲ್ಲಿ ತಿಳಿಸಿದೆ.
ಇನ್ನು, ಈ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸಬೇಕು. ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ:ಡಯಟ್ನಲ್ಲಿ ಕೊಹ್ಲಿ ಸಖತ್ ಕಟ್ಟುನಿಟ್ಟು; ಫುಲ್ ಫಿಟ್ ಆಗಿರೋ ವಿರಾಟ್ ಏನೇನ್ ತಿಂತಾರೆ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ