/newsfirstlive-kannada/media/post_attachments/wp-content/uploads/2024/08/Cm-Siddaramaiah-Governer.jpg)
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜ್ಯಪಾಲರು ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು.
ಇದನ್ನೂ ಓದಿ: ತಮಿಳು ನಟ ವಿಶಾಲ್​ಗೆ ಕಾಡಿದ ಅನಾರೋಗ್ಯ.. ತುಳುನಾಡಿನ ದೈವದ ಮೊರೆ ಹೋದ ಸ್ಟಾರ್
ಇದಾದ ನಂತರ ರಾಜ್ಯ ಸರ್ಕಾರ ಮತ್ತೊಮ್ಮೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಕಳುಹಿಸಿದ್ದು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂತಿಮವಾಗಿ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us