ಸುಪ್ರೀಂಕೋರ್ಟ್ ಆದೇಶ ಉಲ್ಲೇಖಿಸಿ ತನಿಖೆಗೆ ಅನುಮತಿ
ಗೌರ್ನಮೆಂಟ್- ಗವರ್ನರ್ ನಡುವೆ ಕಾನೂನು ಸಂಘರ್ಷ..?
ನೋಟಿಸ್ ಬಗ್ಗೆ ಸಂಪುಟದ ನಿರ್ಣಯ, ಉತ್ತರ ಪರಿಗಣನೆ
ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಮುಳ್ಳು ಚುಚ್ಚಿಕೊಂಡಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಸಂಚಲನ ಸೃಷ್ಟಿಯಾಗಿದೆ. ಸಂವಿಧಾನಿಕ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡೋದು ಅಷ್ಟು ಸುಲಭವಲ್ಲ.. ಹಾಗಾದ್ರೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಕೊಟ್ಟಿರುವ ಕಾರಣಗಳೇನು?
ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್; ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕಾರ..!
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ
ಸಿಎಂ ಸಿದ್ದರಾಮಯ್ಯರ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಾಗಿ ಬಂದಿದೆ. ಸಂವಿಧಾನಿಕ ಉನ್ನತ ಸ್ಥಾನದಲ್ಲಿರುವವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡೋದು ಅಷ್ಟು ಸುಲಭದ ವಿಚಾರವಲ್ಲ. ಆದ್ರೆ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಒತ್ತಡಕ್ಕೆ ಮಣಿದು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ. ಆದ್ರೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ಸುದೀರ್ಘ ಕಾರಣ ಕೊಟ್ಟಿದ್ದಾರೆ.
ಇದನ್ನೂ ಓದಿ: ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್ ಚಂದ್ರಗುರು ನಿಧನ
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರಿ, ರಾಜ್ಯಪಾಲರಿಗೆ ಒಟ್ಟು ಮೂರು ಪ್ರತ್ಯೇಕ ದೂರುಗಳು ಬಂದಿದ್ವು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17 ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 218ರನ್ವಯ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ರು.. ಇನ್ನು ಇದೇ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ಪ್ರದೀಪ್ ಕುಮಾರ್ ಎಸ್ಪಿ ಹಾಗೂ ಸ್ನೇಹಮಯಿ ಕೃಷ್ಣ ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಎಲ್ಲವನ್ನು ಪರಿಗಣಿಸಿ ಇದೀಗ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, 6 ಪುಟಗಳ ಪ್ರಾಸಿಕ್ಯೂಷನ್ ಸ್ಯಾಂಕ್ಷನ್ ಪ್ರತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ. ಹಾಗಾದ್ರೆ ರಾಜ್ಯಪಾಲರು ಏನೆಲ್ಲ ಕಾರಣ ನೀಡಿದ್ದಾರೆ ಅನ್ನೋದನ್ನ ನೋಡೋದಾದ್ರೆ.
ಇದನ್ನೂ ಓದಿ: ಸಂಪುಟ ಸಭೆ ಬೆನ್ನಲ್ಲೇ ಡಿಕೆ ಶಿವಕುಮಾರ್ಗೆ THANKS ಎಂದ ಸಿದ್ದರಾಮಯ್ಯ..!
ರಾಜ್ಯಪಾಲರು ನೀಡಿದ ಕಾರಣಗಳೇನು?
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ಸುದೀರ್ಘ ಕಾರಣಗಳನ್ನೇ ನೀಡಿದ್ದಾರೆ. ಇನ್ನು ರಾಜ್ಯಪಾಲರ ಅನುಮತಿಗೆ ತಡೆಯಾಜ್ಞೆ ತರಲು ಸರ್ಕಾರ ಕಾನೂನು ಹೋರಾಟಕ್ಕೆ ನಿರ್ಧರಿಸಿದೆ. ಹೀಗಾಗಿ ಗೌರ್ನಮೆಂಟ್ ಮತ್ತು ಗವರ್ನರ್ ನಡುವೆ ಕಾನೂನು ಸಂಘರ್ಷವೂ ಶುರುವಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ