ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಅಧಿವೇಶನ
ಜುಲೈ 7 ರಂದು ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ
ಹಸಿವು ಮುಕ್ತ ನಾಡು ಮಾಡಲು ನಾವು ಬದ್ಧರಿದ್ದೇವೆ -ರಾಜ್ಯಪಾಲ
ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲ ಅಧಿವೇಶನ ಶುರುವಾಗಿದೆ. ಜಂಟಿ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಮಾತನಾಡಿದರು. ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಗೂಡೋಣ, ಸಮೃದ್ಧ, ಸೌಹಾರ್ದಪೂರ್ಣ ನಾಡು ನಿರ್ಮಿಸೋಣ ಎಂದು ರಾಜ್ಯಪಾಲರು ಕರೆ ನೀಡಿದರು.
ರಾಜ್ಯಪಾಲರ ಭಾಷಣ
ಮುಂದಿನ 5 ವರ್ಷಗಳ ಕಾಲ ಆರ್ಥಿಕತೆಗೆ ಒತ್ತು ನೀಡುತ್ತೇವೆ. ಆರ್ಥಿಕ ಶಕ್ತಿಯನ್ನಾಗಿ ರಾಜ್ಯವನ್ನು ಹೊರ ಹೊಮ್ಮುವಂತೆ ಮಾಡುತ್ತೇವೆ. ಜಾತಿ, ಧರ್ಮ ಭೇದದ ವಿರುದ್ಧ ಮೊದಲಿನಿಂದಲೂ ಹೋರಾಟ ಮಾಡಿದ್ದೇವೆ. ಪರ ಧರ್ಮಗಳು, ಪರ ಧರ್ಮಗಳ ನೀತಿಯನ್ನ ಗೌರವಿಸುತ್ತೇವೆ. ಬುದ್ಧ, ಬಸವ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಇವರು ಕನಸು ಕಂಡಿದ್ದ ಸಮಾಜವನ್ನು ನಿರ್ಮಾಣ ಮಾಡುತ್ತೇವೆ ಎಂದರು.
ಆಹಾರ ಭದ್ರತೆ ಕಾಯ್ದೆಯಡಿ ಪ್ರಸ್ತುತ 5 kg ಅಕ್ಕಿ ಕೊಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಸೇರಿ 10 ಕೆಜಿ ಕೊಡುತ್ತಿದ್ದೇವೆ. ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ. ಅಕ್ಕಿ ಸಿಗುವವರೆಗೂ ಪ್ರತಿ ಕೆಜಿಗೆ 34 ರೂಪಾಯಿ ವರ್ಗಾವಣೆ ಮಾಡುತ್ತೇವೆ. ಇಂದಿರಾ ಕ್ಯಾಂಟಿನ್ ಮೂಲಕ ಜನರ ಹೊಟ್ಟೆ ತುಂಬಿಸಿದ್ದೇವೆ. ಈಗಾಗಲೇ ಯುವನಿಧಿ ಯೋಜನೆಯನ್ನು ಘೋಷಿಸಿದ್ದೇವೆ. ಯುವನಿಧಿ ಮೂಲಕ ನಿರುದ್ಯೋಗಳಿಗೆ ಭತ್ಯೆ ನೀಡುತ್ತೇವೆ. ಗೃಹಜ್ಯೋತಿಗೆ 209 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದೇವೆ. 2.14 ಕುಟುಂಬಗಳಿಗೆ ಈ ಯೋಜನೆ ಲಾಭವಾಗಲಿದೆ ಎಂದರು.
ಹಸಿವು ಮುಕ್ತ ರಾಜ್ಯ
ಹಸಿದವರಿಗೆ ಅನ್ನ ನೀಡದ ಸರ್ಕಾರ ಅತ್ಯಂತ ಜನದ್ರೋಹಿ ಸರ್ಕಾರ ಎಂದು ಕರೆಸಿಕೊಳ್ಳುತ್ತದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು, ನಿರಾಶ್ರೀತರು ಮುಂತಾದವರ ಹಸಿವರನ್ನು ತಣಿಸಲು ಹಿಂದೆ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗಿತ್ತು. ಈ ಕ್ಯಾಂಟೀನ್ಗಳು ಲಕ್ಷಾಂತರ ಜನರ ಹಸಿದ ಹೊಟ್ಟೆ ತುಂಬಿಸಿ ತೃಪ್ತಿ ನೀಡಿವೆ. ಇವುಗಳನ್ನು ಇನ್ನೂ ಸಮರ್ಥವಾಗಿ ನಾವು ನಡೆಸುತ್ತೇವೆ. ಅನ್ನಭಾಗ್ಯ ಯೋಜನೆ ಮತ್ತು ಇಂದಿರಾ ಕ್ಯಾಂಟೀನ್ಗಳ ಮೂಲಕ ನನ್ನ ಸರ್ಕಾರವು ರಾಜ್ಯವನ್ನು ಹಸಿವು ಮುಕ್ತ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ