/newsfirstlive-kannada/media/post_attachments/wp-content/uploads/2024/12/new-bus.jpg)
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷವನ್ನು ಬರಮಾಡಿಕೊಳ್ಳಲು ತಯಾರಿ ನಡೆಸುತ್ತಿದ್ದಾರೆ. ಜೊತೆಗೆ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಊರಿಗೆ ಹೋಗೋದಕ್ಕೆ ಪ್ರಯಾಣಿಕರು ಪ್ಲಾನ್ ಮಾಡಿದ್ದಾರೆ. ಇದೀಗ ಸರ್ಕಾರ ಪ್ರಯಾಣಿಕರಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದಾರೆ.
ಇದನ್ನೂ ಓದಿ:ಬೆಂಗಳೂರು-ಮೈಸೂರು ಹೈವೇಯಲ್ಲಿ ಕಾರಿಗೆ ಮೊಟ್ಟೆ ಒಡೆದು, ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ
ಹೌದು, ಇಂದಿನಿಂದ ಕೆಎಸ್ಆರ್ಟಿಸಿಗೆ ಹೊಸ ಬಸ್ಗಳು ಸೇರ್ಪಡೆಗೊಂಡಿವೆ. ಇಂದಿನಿಂದಲೇ KSRTC ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳನ್ನು ರಸ್ತೆಗಿಳಿದಿವೆ. 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗೆ ಸಚಿವರು ಇಂದು ಚಾಲನೆ ನೀಡಿದ್ದಾರೆ. ಮೆಜೆಸ್ಟಿಕ್ನ KSRTC ಬಸ್ ನಿಲ್ದಾಣದ ಮುಂಭಾಗ ಹೊಸ ಅಂಬಾರಿ ಉತ್ಸವ್ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದ್ದಾರೆ.
ಯಾವ ಮಾರ್ಗದಲ್ಲಿ ಅಂಬಾರಿ ಉತ್ಸವ ಸೀಪ್ಲರ್ ಕಾರ್ಯಚರಣೆ?
* ಕುಂದಾಪುರ- ಬೆಂಗಳೂರು -2
* ಮಂಗಳೂರು- ಬೆಂಗಳೂರು -2
* ಕೆಂಪೇಗೌಡ ಅಂತರರಾಷ್ಟ್ರೀಯ
ವಿಮಾನ ನಿಲ್ದಾಣ- ಕುಂದಾಪುರ -2
* ಬೆಂಗಳೂರು- ನೆಲ್ಲೂರು -2
* ಬೆಂಗಳೂರು- ಹೈದಾರಬಾದ್ -2
* ಬೆಂಗಳೂರು- ವಿಜಯವಾಡ- 4
* ಬೆಂಗಳೂರು- ಎರ್ನಾಕುಲಂ-2
* ಬೆಂಗಳೂರು- ತ್ರಿಶೂರು - 2
* ಬೆಂಗಳೂರು- ಕ್ಯಾಲಿಕಟ್ -2
ಹೊಸ ಬಸ್ಗಳ ವಿಶಿಷ್ಟತೆ ಏನು?
ಈ ವಾಹನವು 15 ಮೀಟರ್ ಉದ್ದವಿದ್ದು, 40 ಬರ್ತ್ 2x1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ. ಇದು ಶಕ್ತಿಯುತ ಹಾಲೋಜನ್ ಹೆಡ್ ಲೈಟ್‌ಗಳು ಮತ್ತು ಡೇ ಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿದೆ. ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎರಿಯರ್ಸ್ ಹೊಂದಿದೆ. ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ. ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ. ಬಸ್ ಮುಂಭಾಗದ ಗಾಜು 9.5% ಅಗಲವಾಗಿದೆ. ಯು.ಎಸ್.ಬಿ ಮತ್ತು C-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಕೆ. ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ. ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳನ್ನು ಅಳವಡಿಕೆ ಮಾಡಲಾಗಿದೆ. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ. ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಕೆ. ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದು.
ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದೇನು?
20 ಹೊಸ ಬಸ್ಗೆ ಚಾಲನೆ ನೀಡಿದ್ದೇವೆ. 2 ತಿಂಗಳ ಮುಂಚೆ ವೋಲ್ವೋ 20 ಬಸ್ ಉದ್ಘಾಟನೆ ಆಗಿತ್ತು. ಸ್ಲೀಪರ್ ಬಸ್ ಇವತ್ತು ಉದ್ಘಾಟನೆ ಮಾಡಿದ್ದೇವೆ. ಬೆಂಗಳೂರಿನಿಂದ ನಾನಾ ಜಿಲ್ಲೆಗಳಿಗೆ ಹಾಗೂ ಅಂತರ್ ರಾಜ್ಯಗಳಿಗೆ ಈ ಬಸ್ ಗಳು ಸಂಚಾರ ಮಾಡುತ್ತವೆ. 9 ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. 4 ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿದೆ. EV ಬಸ್ಗಳನ್ನ ಉತ್ತರ ಭಾರತದಲ್ಲಿ, 750 EV ಬಸ್ ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದ್ರೆ ಇನ್ನಷ್ಟು ಬಸ್ಗಳನ್ನ ರಸ್ತೆಗಿಳಿಸುತ್ತೇವೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ