newsfirstkannada.com

ಕಬ್ಬು ಬೆಳೆಗಾರರಿಗೆ ಗುಡ್​ನ್ಯೂಸ್​ ಕೊಟ್ಟ ಮೋದಿ ಸರ್ಕಾರ; ಕನಿಷ್ಠ ಬೆಂಬಲ ಬೆಲೆ ಹೆಚ್ಚಳ; ಕ್ವಿಂಟಾಲ್‌ಗೆ ಎಷ್ಟು?

Share :

28-06-2023

    ಕಬ್ಬು ಬೆಳೆಗಾರರಿಗೆ ಗುಡ್​ನ್ಯೂಸ್​ ಕೊಟ್ಟ ಪ್ರಧಾನಿ ಮೋದಿ ಸರ್ಕಾರ

    ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅಸ್ತು

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ಕಬ್ಬು ಬೆಳೆಗಾರರಿಗೆ ಗುಡ್​​ನ್ಯೂಸ್​ ಸಿಕ್ಕಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ರೈತರಿಗೆ ನೀಡುವ ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ಸಿಕ್ಕಿದೆ.

ಯೆಸ್​​, 2023-24 ಸಾಲಿನಲ್ಲಿ ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಏರಿಕೆಯಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 315 ರೂ. ಆಗಲಿದೆ. ಕಬ್ಬು ಬೆಳೆಗಾರರ ಉತ್ಪನ್ನಗಳಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಲೆ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇನ್ನು, ಕರ್ನಾಟಕದಲ್ಲೂ ಹಲವು ವರ್ಷಗಳಿಂದ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ರೈತರು ಹೋರಾಟ ಮುಂದುವರಿದಿದೆ. ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್‌ನಲ್ಲಿ ಟನ್ ಕಬ್ಬಿಗೆ 3800 ರೂ., ಉತ್ತರ ಪ್ರದೇಶದಲ್ಲಿ 3500 ರೂ. ನೀಡಲಾಗುತ್ತಿದೆ. ಜತೆಗೆ ಗುಜರಾತ್‌ನಲ್ಲಿ 4400 ದರ ನಿಗದಿ ಮಾಡಿದ್ದಾರೆ. ರಾಜ್ಯ ಸರ್ಕಾರ ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಎಫ್‌ಆರ್‌ಪಿ ಬೆಲೆ ಕನಿಷ್ಠ ಇಳುವರಿಗೆ ಟನ್‌ಗೆ 3500 ರೂ. ನಿಗದಿ ಮಾಡಬೇಕು ಎಂದು ಒತ್ತಾಯಿಸಿದೆ. ಈ ಮಧ್ಯೆಯೇ ಕೇಂದ್ರ ಸರ್ಕಾರ ಟನ್​​ ಅಲ್ಲ, ಪ್ರತಿ ಕ್ವಿಂಟಾಲ್‌ಗೆ ಕನಿಷ್ಠ ಬೆಂಬಲ ಬೆಲೆ 315 ರೂ. ಏರಿಕೆ ಮಾಡಿ ಸಿಹಿಸುದ್ದಿ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಬ್ಬು ಬೆಳೆಗಾರರಿಗೆ ಗುಡ್​ನ್ಯೂಸ್​ ಕೊಟ್ಟ ಮೋದಿ ಸರ್ಕಾರ; ಕನಿಷ್ಠ ಬೆಂಬಲ ಬೆಲೆ ಹೆಚ್ಚಳ; ಕ್ವಿಂಟಾಲ್‌ಗೆ ಎಷ್ಟು?

https://newsfirstlive.com/wp-content/uploads/2023/06/MSP-sugarcane.jpg

Load More