newsfirstkannada.com

ನೀಟ್ ಪರೀಕ್ಷೆಯಲ್ಲಿ ಶಾಕಿಂಗ್ ನಿರ್ಧಾರ; 1,563 ಅಭ್ಯರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರದ್ದು; ಮುಂದೇನು?

Share :

Published June 13, 2024 at 3:11pm

  ದೇಶದಲ್ಲಿ 1,563 ವಿದ್ಯಾರ್ಥಿಗಳಿಗೆ ನೀಡಿದ್ದ ಗ್ರೇಸ್ ಮಾರ್ಕ್ಸ್ ರದ್ದು!

  ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳ ಮಾರ್ಕ್‌ಶೀಟ್‌ ಅಮಾನತು

  ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ (NTA) ಮಹತ್ವದ ನಿರ್ಧಾರ ಪ್ರಕಟ

ನವದೆಹಲಿ: 2024ನೇ ಸಾಲಿನ ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಗೊಂದಲದಲ್ಲಿದ್ದರು. ಇದೀಗ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ (NTA) ಮಹತ್ವದ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಐಸ್​ಕ್ರೀಸ್​ ತಿನ್ನುವಾಗ ಬಾಯಿಗೆ ಬಂದ ಮನುಷ್ಯನ ಕೈಬೆರಳು.. ಫುಲ್ ಶಾಕ್ ಆದ ಮಹಿಳೆ 

ದೇಶದಲ್ಲಿ 1,563 ವಿದ್ಯಾರ್ಥಿಗಳಿಗೆ ನೀಡಿದ್ದ ಗ್ರೇಸ್ ಮಾರ್ಕ್ಸ್ ಅನ್ನು ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ ರದ್ದು ಮಾಡಿದೆ. ಹೀಗಾಗಿ 2024ನೇ ಸಾಲಿನಲ್ಲಿ ನೀಟ್ ಪರೀಕ್ಷೆ ಬರೆದಿದ್ದ 1,563 ವಿದ್ಯಾರ್ಥಿಗಳ ಮಾರ್ಕ್‌ಶೀಟ್‌ ರದ್ದಾಗಿದೆ.
ನೀಟ್ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್‌ನಿಂದ ಹೆಚ್ಚಿನ ಅಂಕ ಪಡೆದಿದ್ದ ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಇದು ಗೊಂದಲ ಹಾಗೂ ವಿವಾದಕ್ಕೆ ಕಾರಣವಾಗಿತ್ತು.

ಈ 1,563 ವಿದ್ಯಾರ್ಥಿಗಳು ಈಗ ಮರು ಪರೀಕ್ಷೆ ತೆಗೆದುಕೊಳ್ಳಬೇಕು. ಒಂದು ವೇಳೆ ಮರು ಪರೀಕ್ಷೆ ತೆಗೆದುಕೊಳ್ಳದಿದ್ದರೆ ಗ್ರೇಸ್ ಮಾರ್ಕ್ಸ್ ಕಳೆದು ಅವರು ಪಡೆದ ಅಂಕವನ್ನು ತಿಳಿಸಲಾಗುತ್ತೆ.

ಮರುಪರೀಕ್ಷೆ ದಿನಾಂಕ ಘೋಷಣೆ 
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನೀಟ್ ಪರೀಕ್ಷೆಯ ಗ್ರೇಸ್ ಮಾರ್ಕ್ಸ್‌ ಅನ್ನು ರದ್ದು ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರ ಜೊತೆಗೆ ಇದೇ ಜೂನ್ 30ರಂದು ಮರುಪರೀಕ್ಷೆ ನಡೆಸಲಾಗುವುದು ಎಂದಿದೆ. ನೀಟ್ ಪರೀಕ್ಷೆಯಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಎನ್‌ಟಿಎ ಮಾಹಿತಿ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೀಟ್ ಪರೀಕ್ಷೆಯಲ್ಲಿ ಶಾಕಿಂಗ್ ನಿರ್ಧಾರ; 1,563 ಅಭ್ಯರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರದ್ದು; ಮುಂದೇನು?

https://newsfirstlive.com/wp-content/uploads/2024/06/NEET_EXAM.jpg

Load More