newsfirstkannada.com

ಶಿಕ್ಷಕರ ಕ್ಷೇತ್ರದ ಬೈ-ಎಲೆಕ್ಷನ್ ರಿಸಲ್ಟ್; 9 ಅಭ್ಯರ್ಥಿಗಳಲ್ಲಿ ವಿಜಯದ ಮಾಲೆ ಯಾರಿಗೆ..?

Share :

Published February 20, 2024 at 9:16am

  ಫೆಬ್ರವರಿ 16 ರಂದು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ

  ಅಭ್ಯರ್ಥಿಗಳ ಭವಿಷ್ಯ ಬರೆದಿರುವ 19,172 ಮತದಾರರು

  ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ನಡೆದ ಚುನಾವಣೆ

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 19,172 ಮತದಾರರು ಬರೆದಿರುವ ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಒಟ್ಟು 58 ಮತಗಟ್ಟೆಗಳಲ್ಲಿ ಇದೇ ತಿಂಗಳ 16ರಂದು ಮತದಾನ ನಡೆದಿತ್ತು. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಹಳೆಯ ಬ್ಯಾಲೆಟ್ ಪೇಪರ್ ಮಾದರಿ ಮತದಾನ ನಡೆಸಲಾಗಿತ್ತು. ಪ್ರಮುಖವಾಗಿ ಈ ಬಾರಿ ಇವಿಎಂ ಯಂತ್ರವನ್ನು ಬಳಸದೆ ಹಳೆಯ ಪದ್ಧತಿಗೆ ಪ್ರಾಶಸ್ತ್ಯ ನೀಡಲಾಗಿತ್ತು.

ಈ ಬಾರಿ ಯಾರಿಗೆ ಒಲಿಯಲಿದೆ ವಿಜಯಮಾಲೆ?
ಬೆಂಗಳೂರು ಕ್ಷೇತ್ರದ ಬಿಜೆಪಿಯಿಂದ ಆಯ್ಕೆಯಾದ್ದ ಪುಟ್ಟಣ್ಣ ಈ ಬಾರಿ ಕಾಂಗ್ರೆಸ್‌ ಸೇರಿದ್ದು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ರು.. ಬಳಿಕ ಮಾಜಿ ಸಚಿವರಾದ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ವಿರುದ್ಧ ಪುಟ್ಟಣ್ಣ ಸೋಲು ಅನುಭವಿಸಿದ್ರು. ಈ ಹಿನ್ನೆಲೆ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ಪುಟ್ಟಣ್ಣ ರಾಜೀನಾಮೆ ಸಹ ನೀಡಿದ್ರು. ಇದರಿಂದ 2023ರ ಮಾ.16 ರಿಂದ ಈ ಸ್ಥಾನ ತೆರವುಗೊಂಡಿತ್ತು. ಈ ಸ್ಥಾನಕ್ಕೆ ಉಪಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಗೆಲ್ಲುವವರ ಅವಧಿ 2026ರ ನ.11 ರವರೆಗೆ ಇರಲಿದೆ. ಈ ಬಾರಿ ಪುಟ್ಟಣ್ಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಎನ್​ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ವಕೀಲ ಎ.ಪಿ.ರಂಗನಾಥ್ ಸ್ಪರ್ಧೆ ಮಾಡಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ಶಾಂತಿ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತರ ಘಟನೆಗಳು ನಡೆಯದಂತೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದಾರೆ. ಮತ ಎಣಿಕೆ ಹಿನ್ನೆಲೆ ದಂಡ ಪ್ರಕ್ರಿಯ ಸಂಹಿತೆ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ಒಟ್ನಲ್ಲಿ ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗೂ ಮುನ್ನ, ರಾಜ್ಯದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ರಂಗು ಜೋರಾಗಿದೆ. ಬುದ್ಧಿವಂತ ಮತದಾರರಾಗಿರೋ ಶಿಕ್ಷಕರು ಯಾವ ದೃಷ್ಟಿಯಿಂದ ಯಾರನ್ನು ಆಯ್ಕೆ ಮಾಡ್ತಾರೆ ಅನ್ನೋದು ಫಲಿತಾಂಶದ ಮೂಲಕ ಗೊತ್ತಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಿಕ್ಷಕರ ಕ್ಷೇತ್ರದ ಬೈ-ಎಲೆಕ್ಷನ್ ರಿಸಲ್ಟ್; 9 ಅಭ್ಯರ್ಥಿಗಳಲ್ಲಿ ವಿಜಯದ ಮಾಲೆ ಯಾರಿಗೆ..?

https://newsfirstlive.com/wp-content/uploads/2024/02/TEACHER-ELECTION-1.jpg

Load More