newsfirstkannada.com

BEEI: ಭಾರತ್ ಎಲೆಕ್ಟ್ರಾನಿಕ್ಸ್ ಶೈಕ್ಷಣಿಕ ಸಂಸ್ಥೆಗಳಿಂದ ಅದ್ಧೂರಿ 77ನೇ ಸ್ವಾತಂತ್ರ್ಯ ದಿನಾಚರಣೆ

Share :

15-08-2023

    ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಸಾಕಷ್ಟು ಗಣ್ಯರು ಭಾಗಿ

    ಅದ್ಭುತ ನೃತ್ಯಗಳ ಮೂಲಕ ಎಲ್ಲರ ಗಮನ ಸೆಳೆದ ವಿದ್ಯಾರ್ಥಿಗಳು

    ಭಾರತ್ ಎಲೆಕ್ಟ್ರಾನಿಕ್ಸ್​ನ ಸಪ್ತ ಶೈಕ್ಷಣಿಕ ಸಂಸ್ಥೆಯಲ್ಲಿ ಧ್ವಜಾರೋಹಣ

ಬೆಂಗಳೂರು: 77ನೇ ಸ್ವಾತಂತ್ಯ ದಿನಾಚರಣೆಯನ್ನು ಜಾಲಹಳ್ಳಿಯ ಭಾರತ್ ಎಲೆಕ್ಟ್ರಾನಿಕ್ಸ್​ನ ಸಪ್ತ ಶೈಕ್ಷಣಿಕ ಸಂಸ್ಥೆಯ ಬಿಇಎಲ್ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 8:30ಕ್ಕೆ ಬಹಳ ಅದ್ಧೂರಿಯಾಗಿ ಆಚರಿಸಲಾಯಿತು. BEEI ಅಧ್ಯಕ್ಷರಾದ ಪಹುಜ ಬಿ. ಪಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮನೋಜ್ ಜೈನ್ ನಿರ್ದೇಶಕರು, ಹೆಚ್ಚುವರಿ ನಿರ್ದೇಶಕರು, ಬಿಇಎಲ್ ಬೆಂಗಳೂರಿನ ಗಣ್ಯರು ಉಪಸ್ಥಿತರಿದ್ದರು. ಈ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ BEEI ಎಂ.ಸಿ, ಸಪ್ತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ಎಲ್ಲ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಧ್ವಜಾರೋಹಣಕ್ಕೆ ಸಾಕ್ಷಿಯಾದರು.

ಈ ಕಾರ್ಯಕ್ರಮದ ಅಧ್ಯಕ್ಷರಾದ ಪಹುಜ ಬಿ. ಪಿ ಅವರು ಎನ್. ಸಿ.ಸಿ, ಪ್ಯಾರಡೇಯ ಕೆಡಿಟ್ಸ್​ಗಳೊಂದಿಗೆ ಪಥ ಸಂಚಲನದಲ್ಲಿ ಪಾಲ್ಗೊಂಡು ಭಾರತಾಂಬೆಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತರು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಸ್ವಾತಂತ್ರ್ಯದ ಮಹತ್ವವನ್ನು ಮುದ್ದು ಮಕ್ಕಳಿಗೆ ಹಾಗೂ ನೆಲೆಸಿದ್ದ ಸಭಿಕರಿಗೂ ಎಳೆ ಎಳೆಯಾಗಿ ತಿಳಿಸಿದರು. ನಂತರ ಎಲ್ಲರ ಗಮನ ಸೆಳೆಯುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ದೇಶ ಭಕ್ತಿ ಎತ್ತಿಹಿಡಿಯುವ ಅದ್ಭುತ ನೃತ್ಯಗಳ ಮೂಲಕ ಅಮೋಘವಾದ ಪ್ರದರ್ಶನ ನೀಡುವುದರೊಂದಿಗೆ ಕಾರ್ಯಕ್ರಮವನ್ನು ವಿಸ್ಮಯಗೊಳಿಸಿದರು.

ವಿಶೇಷ ಎಂದರೆ ಖೋ-ಖೋ ಪಂದ್ಯಾವಳಿಯಲ್ಲಿ ಬಿಇಎಲ್ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರು ಜಿಲ್ಲೆ ಮಹಿಳಾ ಖೋ-ಖೋ ಪಂದ್ಯಾವಳಿಯಲ್ಲಿ ಜಾಲಹಳ್ಳಿಯ ಬಿಇಎಲ್ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಖೋ-ಖೋ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BEEI: ಭಾರತ್ ಎಲೆಕ್ಟ್ರಾನಿಕ್ಸ್ ಶೈಕ್ಷಣಿಕ ಸಂಸ್ಥೆಗಳಿಂದ ಅದ್ಧೂರಿ 77ನೇ ಸ್ವಾತಂತ್ರ್ಯ ದಿನಾಚರಣೆ

https://newsfirstlive.com/wp-content/uploads/2023/08/independence-day-2.jpg

Load More