Advertisment

ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ

author-image
Ganesh
Updated On
ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ
Advertisment
  • ಕೇರಳದ ಪ್ರಕೃತಿ ವಿಕೋಪದಲ್ಲಿ ಕನ್ನಡಿಗರಿಗೂ ಸಂಕಷ್ಟ
  • ಮಂಡ್ಯ ಜಿಲ್ಲೆ ಕೆಆರ್​ ಪೇಟೆಯ ಒಂದು ಕುಟುಂಬಕ್ಕೆ ಆಪತ್ತು
  • ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಮಂಡ್ಯ: ಕೇರಳ ಗುಡ್ಡ ಕುಸಿತ ದುರಂತದಲ್ಲಿ ಕನ್ನಡಿಗರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50 ಮೃತಪಟ್ಟಿದ್ದಾರೆ. ಇದರ ಮಧ್ಯೆ ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಕುಟುಂಬ ಕೂಡ ಸಂಕಷ್ಟಕ್ಕೆ ಸಿಲುಕಿದೆ.

Advertisment

ಝಾನಿರಾಣಿ ಪುತ್ರ ನಿಹಾಲ್ (2.5), ಅತ್ತೆ ಲೀಲಾವತಿ (55) ನಾಪತ್ತೆ ಆಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಮದುವೆ ಮಾಡಿಕೊಟ್ಟಿದ್ದರು. ಅನಿಲ್ ಕೇರಳದ ಮುಂಡಕೈಯಲ್ಲಿ ನೆಲೆಸಿದ್ದರು. ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ಜೊತೆ ವಾಸವಿದ್ದರು.

ಇದನ್ನೂ ಓದಿ:ಕೇರಳ ಭೂಕುಸಿತಕ್ಕೆ 3 ಕಾರಣಗಳು; ಬೆಟ್ಟ, ಗುಡ್ಡ ಕುಸಿಯುವ ಹಿಂದಿನ ಸತ್ಯ ಬಿಚ್ಚಿಟ್ಟ ವಿಜ್ಞಾನಿ..!

publive-image

ನಿಹಾಲ್​ ಹಾಗೂ ಲೀಲಾವತಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮತ್ತೊಂದೆಡೆ ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಅವರು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಇತ್ತ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisment

ಇದನ್ನೂ ಓದಿ:ಸೀರೆಗೆ ಅವಮಾನ..!! ಭಾರತೀಯರ ಕಣ್ಣು ಕೆಂಪಾಗಿಸಿದ ನಾರಿ ಸ್ಯಾರಿ ಗಲಾಟೆ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment