ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿರೋರಿಗೆ ಗುಡ್​ನ್ಯೂಸ್ ನೀಡಿದ ಸಚಿವೆ ಹೆಬ್ಬಾಳ್ಕರ್..!

author-image
Ganesh
Updated On
ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿರೋರಿಗೆ ಗುಡ್​ನ್ಯೂಸ್ ನೀಡಿದ ಸಚಿವೆ ಹೆಬ್ಬಾಳ್ಕರ್..!
Advertisment
  • ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
  • ಅಪಘಾತದಿಂದ ನಾನು ವಿಶ್ರಾಂತಿಯಲ್ಲಿದ್ದೆ, ಅದಕ್ಕೆ ವಿಳಂಬ
  • ಬಿಜೆಪಿ ನಮ್ಮ ‘ಗ್ಯಾರಂಟಿ ಯೋಜನೆ’ಗಳನ್ನ ಕಾಪಿ ಮಾಡ್ತಿದೆ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್​​ನ್ಯೂಸ್​ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಹಣವನ್ನು ಸಂಧಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಇದುವರೆಗೂ ಬೆಂಗಳೂರಿನ ಕೇಂದ್ರ ಕಚೇರಿಯಿಂದ ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡಲಾಗುತ್ತಿತ್ತು. ಇನ್ಮುಂದೆ ಹಾಗೆ ಆಗುವುದಿಲ್ಲ. ಇದನ್ನೂ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ (CDPO) ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಆ ನಂತರ ಫಲಾನುಭವಿ ಖಾತೆಗೆ ಜಮೆ ಮಾಡಲಾಗುವುದು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: 1 ರೂಪಾಯಿ ವರದಕ್ಷಿಣೆಯ ಮದುವೆ.. ಮನಂ ಸಿನಿಮಾ ಸ್ಟೋರಿ ಮೀರಿಸುತ್ತಿದೆ; ನರೇಂದ್ರ ಗೀತು ಮ್ಯಾರೇಜ್ ಸ್ಟೋರಿ!

ನನಗೆ ಅಪಘಾತ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇಷ್ಟು ದಿನ ವಿಶ್ರಾಂತಿಯಲ್ಲಿದ್ದೆ. ಹೀಗಾಗಿ ಹಣ ಬಿಡುಗಡೆಗೆ ವಿಳಂಭವಾಗಿದೆ. ಈಗಾಗಲೇ ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ. ವಿರೋಧ ಪಕ್ಷಗಳು ಟೀಕೆ ಮಾಡೋದು ಬಿಟ್ಟರೆ ಬೇರೆ ಕೆಲಸ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿ, ಈಗ ಅವರೇ ಕೆಲವು ರಾಜ್ಯಗಳಲ್ಲಿ ಕಾಪಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಡಿಸಿಎಂ ಅಸಹಾಯಕತೆ ಮಾತು.. ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕೆಂಡ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment