newsfirstkannada.com

ಪ್ರತಿ ತಿಂಗಳು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಸಿಗಲಿದೆ ₹2 ಸಾವಿರ; ಈ ಲಿಸ್ಟ್​​ನಲ್ಲಿ ನೀವಿದ್ದೀರಾ?

Share :

20-08-2023

    ಬೆಳಗಾವಿಯ ಕಾರ್ಯಕ್ರಮ ಸಾಂಸ್ಕೃತಿಕ ನಗರಿಗೆ ಶಿಫ್ಟ್!

    ಮನೆಯೊಡತಿಗೆ 2 ಸಾವಿರ ಹಣ ನೀಡುವ ಯೋಜನೆ

    ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಕಲ ಸಜ್ಜು

ಬೆಂಗಳೂರು: ವಿಧಾನಸಭೆ ಚುನಾವಣೆಯ ದಿಕ್ಕು ದೆಸೆ ಬದಲಿಸಿದ್ದು, ಕಾಂಗ್ರೆಸ್​​​ನ ಗ್ಯಾರಂಟಿಗಳು. ಈ ಗ್ಯಾರಂಟಿಗಳ ಉತ್ತರ ಫಲಿತಾಂಶದಲ್ಲೂ ಪ್ರತಿಫಲನ ಆಗಿತ್ತು. ಅದರಲ್ಲೂ ಗೃಹಲಕ್ಷ್ಮಿ ಯೋಜನೆ, ಮಹಿಳೆಯರನ್ನ ಹೆಚ್ಚು ಸೆಳೆದಿತ್ತು. ಸದ್ಯ ಮನೆಯ ಒಡತಿ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸರ್ಕಾರ ದಿನಾಂಕ ಹಾಗೂ ಸಮಯ ಫಿಕ್ಸ್ ಮಾಡಿದೆ.

ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಕಾರಣಾಂತರಗಳಿಂದ ಮೈಸೂರಿನಲ್ಲಿ ನಡೆಯಲಿದ್ದು ಅದ್ಧೂರಿ ಕಾರ್ಯಕ್ರಮ ನಡೆಸಲು ಸರ್ಕಾರ ತಯಾರಾಗುತ್ತಿದೆ. ಕಾಂಗ್ರೆಸ್​ನ ಪಂಚ ಗ್ಯಾರಂಟಿಗಳಲ್ಲಿ ಒಂದು. ಮನೆಯೊಡತಿಗೆ 2 ಸಾವಿರ ಹಣ ನೀಡುವ ಯೋಜನೆ. ಈಗಾಗಲೇ ಗೃಹಲಕ್ಷ್ಮಿಗೆ ನೋಂದಣಿ ಪ್ರಕ್ರಿಯೆ ಬಹುತೇಕ ಮುಗಿಯುತ್ತಾ ಬಂದಿದೆ. ಇದುವರೆಗೆ 1 ಕೋಟಿಗೂ ಅಧಿಕ ಮಹಿಳೆಯರು ಯೋಜನೆಗೆ ನೋಂದಣಿ ಮಾಡಿಸಿದ್ದು ಪ್ರತಿ ಮನೆ ಒಡತಿಯರು ಧನಲಕ್ಷ್ಮಿ ಸ್ವಾಗತಿಸಲು ಸಜ್ಜಾಗಿದ್ದಾರೆ.

ಕಾಂಗ್ರೆಸ್​ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು CM ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದ್ದರು. ಬಳಿಕ ಜುಲೈ 20ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿತ್ತು. ಸಣ್ಣಪುಟ್ಟ ಗೊಂದಲಗಳನ್ನು ಬಿಟ್ಟರೆ ನೋಂದಣಿ ಕಾರ್ಯ ಸರಾಗವಾಗಿ ನಡೆದಿದೆ. ಇದುವರೆಗೂ 1.28 ಕೋಟಿಗೂ ಅಧಿಕ ನಾರಿಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಆಗಸ್ಟ್ 27ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಿ ವನಿತೆಯರ ಖಾತೆಗೆ 2 ಸಾವಿರ ಜಮೆ ಮಾಡಲು ಯೋಜನೆ ರೂಪಿಸಲಾಗಿತ್ತು. ಆದ್ರೆ ಸರ್ಕಾರ ಕೆಲ ಕಾರಣಗಳಿಂದ ಉದ್ಘಾಟನೆ ದಿನಾಂಕ ಹಾಗೂ ಸಮಯ ಬದಲಿಸಿದೆ.

‘ಗೃಹಲಕ್ಷ್ಮಿ’ಗೆ ಚಾಲನೆ ನೀಡಲಿರುವ ರಾಹುಲ್ ಗಾಂಧಿ!

ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಆಗಸ್ಟ್ 30ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಬರ್ತಿದ್ದಾರೆ. ಅಂದೇ ಮೈಸೂರಿನಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದೂ ಅಲ್ಲದೇ ಬೇರೆ ಬೇರೆ ಕಾರ್ಯಕ್ರಮಗಳ ನಿಮಿತ್ತ ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್ ಆಗಿದೆ ಎಂದಿದ್ದಾರೆ.

ಇನ್ನು ಮೈಸೂರಿನಲ್ಲಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರು, ಮಂಡ್ಯ, ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರ ಜೊತೆ ಸಭೆ ನಡೆಸಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಕಳೆದ ವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಗೃಹಲಕ್ಷ್ಮಿ ಯೋಜನೆ ಸಂಬಂಧ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ​ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚೆ ನಡೆಸಿದ್ದರು.

ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್ ಆದ ಕಾರಣ ಅನ್ನಭಾಗ್ಯ ಉದ್ಘಾಟನೆ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಲಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಆಗಸ್ಟ್ 15ರ ಬಳಿಕ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲಿದೆ ಅಂತ ಸರ್ಕಾರ ಹೇಳಿತ್ತು. ಅದರಂತೆ ಆಗಸ್ಟ್ 30ರಂದು ಯೋಜನೆಗೆ ಚಾಲನೆ ನೀಡಲು ಸಜ್ಜಾಗಿದ್ದು ನುಡಿದಂತೆ ನಡೆಯಲಿದೆ. ವರಮಹಾಲಕ್ಷ್ಮಿ ಹಬ್ಬದ ಹೊತ್ತಿಗೆ ಭಗಿನಿಯರು ಧನಲಕ್ಷ್ಮಿಯನ್ನು ಸ್ವಾಗತಿಸಲು ಉತ್ಸುಕರಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರತಿ ತಿಂಗಳು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಸಿಗಲಿದೆ ₹2 ಸಾವಿರ; ಈ ಲಿಸ್ಟ್​​ನಲ್ಲಿ ನೀವಿದ್ದೀರಾ?

https://newsfirstlive.com/wp-content/uploads/2023/07/Laxmi-hebbalkar-1.jpg

Load More