ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ; ಅಜ್ಜಿ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ

author-image
Veena Gangani
Updated On
ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ; ಅಜ್ಜಿ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ
Advertisment
  • ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಊಟ ಹಾಕಿಸಿದ ಅಜ್ಜಿ
  • ರಾಜಕೀಯವಾಗಿ ಸಿದ್ದರಾಮಯ್ಯ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು
  • ಅಜ್ಜಿಯ ಕಾರ್ಯಕ್ಕೆ ಸಾಥ್ ನೀಡಿದ ಸುಟ್ಟಟ್ಟಿ ಗ್ರಾಮದ ಮಹಿಳೆಯರು

ಚಿಕ್ಕೋಡಿ: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದಿದೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ಊರಿಗೆಲ್ಲಾ ಊಟ ಹಾಕಿಸಿದ್ದಾರೆ.

ಇದನ್ನೂ ಓದಿ:‘ಗೃಹ ಆರೋಗ್ಯ’ ಯೋಜನೆ ಪ್ರಸ್ತಾಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್; ಗೃಹಲಕ್ಷ್ಮೀ ಬಗ್ಗೆಯೂ ಮಾತು

publive-image

ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2000 ಹಣ ನೀಡ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ, ಅಜ್ಜಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಹರಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.

ಸಾಕಷ್ಟು ಮಹಿಳೆಯರು ಕಾಂಗ್ರೆಸ್​ನಿಂದ ಬಂದ ಹಣದಿಂದ ಬಂಗಾರ, ಫ್ರಿಜ್, ಟಿವಿ ಇನ್ನು ಹತ್ತು ಹಲವಾರು ವಸ್ತುಗಳನ್ನು ಖರೀದಿಸಿದ್ದಾರೆ. ಆದರೆ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ಊರಿಗೆಲ್ಲಾ ಊಟ ಹಾಕಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment